Monday, 16th May 2022

ಕ್ಷಮೆ ಕೇಳಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್

ramesh kumar

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದ ವಿಧಾನಸಭೆ ಅಧಿವೇಶನದಲ್ಲಿ ಅಸಂಸದೀಯ ಮಾತುಗಳನ್ನಾಡಿದ್ದ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಟ್ವೀಟ್ ಮೂಲಕ ಕ್ಷಮೆ ಕೇಳಿದ್ದಾರೆ.

ಅತ್ಯಾಚಾರದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು.

ವಿಧಾನಸಭೆಯಲ್ಲಿ ರೈತರ ಸಮಸ್ಯೆಗಳ ಕುರಿತು ಚರ್ಚೆಗೆ ಶಾಸಕರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಬಳಿ ಸಮಯ ಕೋರಿದ ಸಂದರ್ಭದಲ್ಲಿ, ಅತ್ಯಾಚಾರ ಅನಿವಾರ್ಯವಾದಾಗ ಮಲಗಿ ಆನಂದಿಸಿ ಎಂಬ ಮಾತಿದೆ ಎಂದು ಕೆ.ಆರ್. ರಮೇಶ್ ಕುಮಾರ್ ಹೇಳಿದ್ದರು.

ಎಲ್ಲರಿಗೂ ಸಮಯ ನೀಡಿದರೆ ಅಧಿವೇಶನ ಹೇಗೆ ನಡೆಸುವುದು ಎಂದು ಸ್ಪೀಕರ್‌ ಕೇಳಿದ ಸಂದರ್ಭದಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ. ರಮೇಶ್ ಕುಮಾರ್ ಹೇಳಿಕೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಕ್ಕು ಸುಮ್ಮ ನಾದರು.

ಪತ್ರಕರ್ತೆ ಅನುಶಾ ರವಿ ಸೂದ್, ಕಾಂಗ್ರೆಸ್‌ನ ಹಿರಿಯ ನಾಯಕ ರಮೇಶ್ ಕುಮಾರ್ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ಪೀಕರ್‌ ಕಾಗೇರಿ ಅವರು ಸದನದಲ್ಲಿ ಅವ್ಯವಸ್ಥೆಯ ಬಗ್ಗೆ ಅಸಹಾಯಕತೆಯನ್ನು ವ್ಯಕ್ತಪಡಿಸಿ ದ್ದಾರೆ. ಜೋಕ್ ಎಂದು ಹೇಳಲಾಗುವ ಈ ಮಾತಿಗೆ ರಮೇಶ್ ಕುಮಾರ್ ಹಾಗೂ ಕಾಗೇರಿ ಇಬ್ಬರೂ ನಕ್ಕಿದ್ದಾರೆ,” ಎಂದು ಟೀಕಿಸಿದ್ದಾರೆ.

ಈ ಕಾಂಗ್ರೆಸ್‌ ನಾಯಕರ ಹೇಳಿಕೆಯನ್ನು ಪ್ರಿಯಾಂಕ ಗಾಂಧಿ, ರಾಹುಲ್‌ ಗಾಂಧಿ ನೋಡಲಿ. ಈತನನ್ನು ಪಕ್ಷದಿಂದ ಹೊರಕ್ಕೆ ಹಾಕಲಿ ಎಂದು ಕೆಲವರು ಆಗ್ರಹ ಮಾಡಿದ್ದಾರೆ.