Thursday, 23rd March 2023

ಇಂದಿನಿಂದ ನಾಲ್ಕು ದಿನ ಲಸಿಕೆ ಉತ್ಸವ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ನಾಲ್ಕು ದಿನಗಳ ಕಾಲ ದೇಶದಾದ್ಯಂತ ‘ಲಸಿಕೆ ಉತ್ಸವ’ವನ್ನು ಆಚರಿಸುವಂತೆ ಕರೆ ನೀಡಿದ್ದಾರೆ.

ಈಗಾಗಲೇ ಕೊರೊನಾ ಲಸಿಕೆ ಅಭಿಯಾನ ಆರಂಭಗೊಂಡಿದ್ದು, 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

‘ಲಸಿಕೆ ಉತ್ಸವ’ದ ಸಂದರ್ಭದಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲ ವಯೋಮಾನದವರು ಗರಿಷ್ಠ ಪ್ರಮಾಣದಲ್ಲಿ ಲಸಿಕೆ ಪಡೆಯ ಬೇಕೆಂಬ ಉದ್ದೇಶ ಹೊಂದಲಾಗಿದೆ. ಕಳೆದ ಗುರುವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ‘ಲಸಿಕೆ ಉತ್ಸವ’ದ ವಿಚಾರ ಪ್ರಸ್ತಾಪಿಸಿದ್ದರು.

ದೇಶದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ಕಳೆದ ಕೆಲವು ದಿನಗಳಿಂದ ಪ್ರತಿನಿತ್ಯ ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ.

error: Content is protected !!