Tuesday, 18th January 2022

ಕೈ ಹೈಕಮಾಂಡ್‌ ಗರಂ, ಹೈಕೋರ್ಟ್‌ ಚಾಟಿ: ಮೇಕೆದಾಟು ಪಾದಯಾತ್ರೆಗೆ ಫುಲ್‌ ಸ್ಟಾಪ್‌

ನವದೆಹಲಿ/ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಕಾಂಗ್ರೆಸ್ ಮುಖಂಡರ ನಿರ್ಧರಿಸಿದ್ದಾರೆ. ಹೈ ಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಐದನೇ ದಿನಕ್ಕೆ ಯಾತ್ರೆ ಸ್ಥಗಿತಗೊಂಡಿದೆ.

ಕರ್ನಾಟಕ ಹೈಕೋರ್ಟ್ ಕರೋನಾ ಹೆಚ್ಚಳದ ನಡುವೆಯೂ ಪಾದಯಾತ್ರೆ ನಡೆಸುತ್ತಿರುವುದಕ್ಕೆ ಗರಂ ಆಗಿದೆ. ಜೊತೆಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವಂತ ಅನೇಕ ಕಾಂಗ್ರೆಸ್ ನಾಯಕರಿಗೆ ಕೋವಿಡ್ ದೃಢಪಟ್ಟಿದೆ. ಈ ಎಲ್ಲಾ ಕಾರಣದಿಂದಾಗಿ ಕಾಂಗ್ರೆಸ್ ನಾಯಕರಿಗೆ ಈ ತಕ್ಷಣವೇ ಪಕ್ಷಕ್ಕೆ ಮುಜುಗರವಾಗದಂತೆ ಕಾಂಗ್ರೆಸ್ ಹೈಕಮಾಂಡ್ ಪಾದಯಾತ್ರೆ ನಿಲ್ಲಿಸುವಂತೆ ತಿಳಿಸಿದೆ ಎನ್ನಲಾಗಿದೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಮೇಕೆದಾಟು ಪಾದಯಾತ್ರೆಯನ್ನು ನಿರ್ಬಂಧಿಸಿ ಆದೇಶಿಸಿದೆ.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲ ಅವರ ಮೂಲಕ ಸೂಚನೆ ನೀಡಿರುವ ಕಾಂಗ್ರೆಸ್ ಹೈಕಮಾಂಡ್, ಕರೋನಾ ಹೆಚ್ಚಳ ಹಿನ್ನಲೆ, ರಾಜ್ಯ ಸರ್ಕಾರ ನಿಷೇಧ, ಹೈಕೋರ್ಟ್ ಗರಂ ಹಾಗೂ ಕಾಂಗ್ರೆಸ್ ಮುಖಂಡರು ಪಾಸಿಟಿವ್ ಆಗುತ್ತಿರುವ ನಡುವೆಯೂ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವುದು ಸರಿಯಲ್ಲ. ಪಕ್ಷಕ್ಕೆ ಮುಜುಗರ ಕೂಡ ಉಂಟಾಗಲಿದೆ. ಕೂಡಲೇ ಪಾದಯಾತ್ರೆ ನಿಲ್ಲಿಸುವಂತೆ ಕಾಂಗ್ರೆಸ್ ನಾಯಕರಿಗೆ ಹೈ ಕಮಾಂಡ್ ಸೂಚಿಸಿದೆ ಎನ್ನಲಾಗುತ್ತಿದೆ.

ಈ ನಡುವೆ ರಾಮನಗರ ತಲುಪಿರುವ ಕಾಂಗ್ರೆಸ್ ಪಾದಯಾತ್ರೆಯ ಕಾಂಗ್ರೆಸ್ ಕಚೇರಿಗೆ ರಾಮ ನಗರ ಎಸ್ಪಿ ಗಿರೀಶ್ ಭೇಟಿ ನೀಡಿ, ಕಾಂಗ್ರೆಸ್ ಮುಖಂಡರನ್ನು ಪಾದಯಾತ್ರೆ ಕೈಬಿಡುವಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮಾಹಿತಿ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ರಾನಗರದ ಕಾಂಗ್ರೆಸ್ ಕಚೇರಿಯಲ್ಲಿ ಹಿರಿಯ ಮುಖಂಡರ ಸಭೆ ಆರಂಭ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ರಾಮಲಿಂಗ ರೆಡ್ಡಿ, ಸಲೀಂ ಅಹಮದ್, ಧ್ರುವ ನಾರಾಯಣ, ಹಿರಿಯ ಮುಖಂಡರಾದ ರಮೇಶ್ ಕುಮಾರ್, ಕೆ.ಎಚ್. ಮುನಿಯಪ್ಪ, ಹರಿಪ್ರಸಾದ್, ಚೆಲುವರಾಯಸ್ವಾಮಿ ಮತ್ತಿತರರ ಉಪಸ್ಥಿತರಿದ್ದರು.