ಸಿಪಿಐ ಪಿವಿ ಸಾಲಿಮಠ ಸಜೀವ ದಹನಗೊಂಡ ಕಾರು ಅಪಘಾತ ಸಂಭವಿಸಿದ್ದು ಹೇಗೆ?
ಸಿಪಿಐ ಪಿವಿ ಸಾಲಿಮಠ ಹುಬ್ಬಳ್ಳಿಯಿಂದ ಗದಗಿಗೆ ಹೋಗುವಾಗ ಡಿವೈಡರ್ಗೆ ಮೊದಲು ಕಾರು ಡಿಕ್ಕಿಯಾಗಿ, ಪಕ್ಕದಲ್ಲಿದ್ದ ರಸ್ತೆಗೆ ಜಂಪ್ ಆಗಿದೆ. ತಾವು ಹೋಗುತ್ತಿದ್ದ ಮಾರ್ಗದ ಎದುರು ಬದಿಯ ರಸ್ತೆಯನ್ನು ಇಳಿದು ಮತ್ತೆ ಮೇಲಕ್ಕೆ ಬಂದು ನಂತರ ಮತ್ತೆ ರಸ್ತೆ ಪಕ್ಕದಲ್ಲಿ ಹೋಗಿ ನಿಂತಿದೆ. ಈ ಸಮಯದಲ್ಲಿ ಪೆಟ್ರೋಲ್ ಸೋರಿಕೆಯಿಂದ ಹೊತ್ತಿಕೊಂಡ ಬೆಂಕಿಯಿಂದಾಗಿ ಸಜೀವವಾಗಿ ದಹನವಾಗಿದ್ದಾರೆ. ಕಾರಿನಿಂದ ಹೊರಗಡೆ ಬರುವುದಕ್ಕಾಗದೆ ಒಳಗಡೆಯೇ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.