47 ವರ್ಷದ ಅಂಕಲ್ ಕಾಟ ತಾಳಲಾಗದೆ ಆತ್ಮಹತ್ಯೆಗೆ ಶರಣಾದ 19ರ ಯುವತಿ
19 ವರ್ಷದ ವಂದನಾ ಗದಗ ಜಿಮ್ಸ್‌ನಲ್ಲಿ ಪ್ಯಾರಾಮೆಡಿಕಲ್ ಓದುತ್ತಿದ್ದಳು. ಮಗಳ ಬಗ್ಗೆ ಪೋಷಕರು ಸಾಕಷ್ಟು ಕನಸು ಕಂಡಿದ್ದರು. ಈಕೆಯ ಹಿಂದೆ ಬಿದ್ದ 47 ವರ್ಷದ ಕಿರಣ ಮದುವೆ ಆಗು ಎಂದು ನಿತ್ಯ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ. ಅಲ್ಲದೇ ಇಬ್ಬರ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ.