Friday, 9th December 2022

‘ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ: ಕಾಂಗ್ರೆಸ್‌ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ
ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿ, ‘ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದರು

ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಬಾವುಟ ಪ್ರದರ್ಶಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ ನಡುವೆ ವಾಗ್ವಾದ ನಡೆಯಿತು. ಬಿಜೆಪಿಯವರು ಸಾವರ್ಕರ್ ಚಿತ್ರ ಪ್ರದರ್ಶಿಸಿದರು. ಕಾಂಗ್ರೆಸ್‌ನವರು ಸಿದ್ದರಾಮಯ್ಯಗೆ ಜೈ ಘೋಷಣೆ ಮೊಳಗಿಸಿದರು.

ಪೊಲೀಸರು ಎರಡು ಗುಂಪುಗಳನ್ನು ಚದುರಿಸಿದರು.