Wednesday, 5th October 2022

ಶಾಲೆ ಆರಂಭಿಸುವ ವಿಚಾರದಲ್ಲಿ ಸರ್ಕಾರಕ್ಕೆ ಆತುರವಿಲ್ಲ: ಸಚಿವ ಸುಧಾಕರ್‌

ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಆತುರವಿಲ್ಲ. ತಜ್ಞರ ವರದಿ ಬಳಿಕ ನಿರ್ಧಾರ ಕೈಗೊಳ್ಳ ಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಶಾಲೆ,‌ ಕಾಲೇಜು ಆರಂಭಿಸುವ ವಿಷಯದಲ್ಲಿ ಸರ್ಕಾರಕ್ಕೆ ಯಾವುದೇ ತರಾತುರಿ ಇಲ್ಲ. ಈ ಕುರಿತು ವರದಿ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ. ಈಗಾಗಲೇ ಸಮಿತಿ ಅನೇಕ ಸಭೆಗಳನ್ನು ನಡೆಸಿ ಎಲ್ಲ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದೆ. ಇತರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮ ಗಳನ್ನೂ ಪರಿಶೀಲಿಸಿ ತಜ್ಞರು ವರದಿ ನೀಡಲಿದ್ದಾರೆ.

ವರದಿ ಆಧರಿಸಿ ಮುಖ್ಯಮಂತ್ರಿ ಅವರು ಸಚಿವರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಈ ವಿಷಯದಲ್ಲಿ ಯಾವುದೇ ಆತುರವಿಲ್ಲ’ ಎಂದು ಸ್ಪಷ್ಟಪಡಿಸಿದರು.