Tuesday, 5th July 2022

ಜಿಲಿಟಿನ್ ಸ್ಪೋಟ ಪ್ರಕರಣ: ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಿ ಎಂದ ಕಿಚ್ಚ ಸುದೀಪ್‌

ಬೆಂಗಳೂರು : ಶಿವಮೊಗ್ಗದ ಹುಣಸೋಡು ಗಣಿ ಪ್ರದೇಶದಲ್ಲಿ ಜಿಲಿಟಿನ್ ಸ್ಪೋಟಗೊಂಡು ಮೃತಪಟ್ಟ ಕಾರ್ಮಿಕರ ಕುಟುಂಬ ಗಳಿಗೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಟ ಸುದೀಪ್, ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಆತ್ಮಕ್ಕೆಶಾಂತಿ ಸಿಗಲಿ, ಪ್ರತಿ ಪ್ರಾಣವು ಅಮೂಲ್ಯ, ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.

ನಿನ್ನೆ ರಾತ್ರಿ ಹುಣಸೋಡು ಗಣಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಸ್ಪೋಟದಲ್ಲಿ ಈವರೆಗೆ ಸುಮಾರು 8 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಸದ್ಯ ಘಟನೆ ನಡೆದ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.