Thursday, 11th August 2022

ಮಸೀದಿ ಸಂಕೀರ್ಣದ ವೀಡಿಯೊ ಸಮೀಕ್ಷೆ: ನ್ಯಾಯಾಧೀಶರಿಗೆ ಬೆದರಿಕೆ ಪತ್ರ

ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೊ ಸಮೀಕ್ಷೆಗೆ ಆದೇಶಿಸಿದ ನ್ಯಾಯಾ ಧೀಶರಿಗೆ ಬೆದರಿಕೆ ಪತ್ರ ಬಂದಿದೆ.

ವಾರಣಾಸಿಯ ಸಿವಿಲ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರು ಏಪ್ರಿಲ್ 26 ರಂದು ಆದೇಶಿಸಿದ ವೀಡಿಯೊ ಸಮೀಕ್ಷೆ ಯನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ನ್ಯಾ.ರವಿಕುಮಾರ್ ದಿವಾಕರ್ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಗೃಹ), ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮತ್ತು ವಾರಣಾಸಿ ಪೊಲೀಸ್ ಕಮಿಷನರೇಟ್‌ಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ನ್ಯಾಯಾಧೀಶರಿಗೆ ಇಸ್ಲಾಮಿಕ್ ಆಗಾಜ್ ಚಳವಳಿಯ ಪರವಾಗಿ ಕಾಶಿಫ್ ಅಹ್ಮದ್ ಸಿದ್ದಿಕಿ ಪತ್ರ ಬರೆದಿದ್ದಾರೆ. ಉಪ ಪೊಲೀಸ್ ಆಯುಕ್ತ ವರುಣ ಅವರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನ್ಯಾಯಾಧೀಶರ ಭದ್ರತೆಗಾಗಿ ಈಗಾಗಲೇ ಒಂಬತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.