Thursday, 2nd February 2023

ಹೊಂದಾಣಿಕೆ ರಾಜಕೀಯ ಮಾಡುತ್ತಿಲ್ಲ, ಹಿರಿಯರ ಸಲಹೆ ಪಡೆಯುವುದರಲ್ಲಿ ತಪ್ಪಿಲ್ಲ: ಎಚ್.ಕೆ.ಕುಮಾರಸ್ವಾಮಿ

ಹಾಸನ: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ರಾಜಕೀಯ ಮಾಡುತ್ತಿಲ್ಲ, ಹಿರಿಯರ ಸಲಹೆ ಪಡೆಯುವು ದರಲ್ಲಿ ತಪ್ಪಿಲ್ಲ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹೇಳಿದ್ದಾರೆ.

‘ಸಿ.ಎಂ ಆದ ಕೂಡಲೇ ದೇವೇಗೌಡ ಭೇಟಿ ಮಾಡುವ ಅಗತ್ಯವೇನಿತ್ತು. ಹೊಂದಾಣಿಕೆ ರಾಜಕೀಯ ಮಾಡಿದರೆ ಸಹಿಸಲ್ಲ’ ಎಂಬ ಶಾಸಕ ಪ್ರೀತಂ ಗೌಡ ಹೇಳಿಕೆಗೆ ಭಾನುವಾರ ಎಚ್.ಕೆ.ಕುಮಾರಸ್ವಾಮಿ ಪ್ರತಿಕ್ರಿಯಿಸಿ ದರು. ರಾಜ್ಯದ ಹಿತದೃಷ್ಟಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರು ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ, ಸಲಹೆ ಪಡೆದಿದ್ದಾರೆ. ಹಿರಿಯರ ಸಲಹೆ ಪಡೆಯುವುದರಲ್ಲಿ ತಪ್ಪಿಲ್ಲ. ನರೇಂದ್ರ ಮೋದಿ ಮತ್ತು ದೇವೇಗೌಡರು ದೂರವಾಣಿ ಮೂಲಕ ಹಲವು ಅಭಿವೃದ್ಧಿ ವಿಷಯ ಕುರಿತು ಚರ್ಚೆ ನಡೆಸುತ್ತಾರೆ’ ಎಂದರು.

‘‌ಎಸ್‌.ಆರ್‌.ಬೊಮ್ಮಾಯಿ ಸರ್ಕಾರ ಬೀಳಿಸಿದ್ದು ದೇವೇಗೌಡರು ಎಂದು ಯಾವ ಪುಸ್ತಕ ಓದಿ ಪ್ರೀತಂ ತಿಳಿದು ಕೊಂಡಿದ್ದಾರೆ. ದೇವೇಗೌಡರು ಪ್ರಧಾನಿಯಾಗಿದ್ದಾಗ ಬೊಮ್ಮಾಯಿ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿದ್ದರು. ಇದು ಪ್ರೀತಂಗೆ ರಾಜಕೀಯದ ಅನುಭವದ ಕೊರತೆ ತೋರಿಸುತ್ತದೆ’ ಎಂದರು.

ಬೊಮ್ಮಾಯಿ ಸರ್ಕಾರದ ಮಂತ್ರಿಮಂಡಲ ಅತ್ಯಂತ ಅಸಮತೋಲನದಿಂದ ಕೂಡಿದೆ. ಆರೋಪ ಇದ್ದ ಮಹಿಳೆಗೆ ಮಂತ್ರಿ ಭಾಗ್ಯ ದೊರಕಿಸಿಕೊಟ್ಟಿದ್ದಾರೆ. ಜಿಲ್ಲೆಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ ಎಂಬ ನೋವು ಇದೆ. ಕೊಡಗಿನ ಹಿರಿಯ ಶಾಸಕ ಬೋಪಯ್ಯ ಅವರಿಗಾದರೂ ಸಚಿವ ಸ್ಥಾನ ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟರು.

error: Content is protected !!