Wednesday, 28th July 2021

ಹೆಚ್.ಟಿ.ಕೃಷ್ಣಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಚಿವ ಡಾ.ನಾರಾಯಣಗೌಡ

ಮಂಡ್ಯ: ಶುಕ್ರವಾರ ನಿಧನರಾದ ಮಾಜಿ ಸಚಿವ ಹೆಚ್ ಟಿ ಕೃಷ್ಣಪ್ಪ ಅವರ ಪಾರ್ಥಿವ ಶರೀರಕ್ಕೆ ಸಚಿವ ಡಾ.ನಾರಾಯಣಗೌಡ ಅಂತಿಮ ನಮನ ಸಲ್ಲಿಸಿದರು. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿರುವ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು.

ಹೆಚ್ ಟಿ ಕೃಷ್ಣಪ್ಪ ಅವರು, ರಾಮಕೃಷ್ಣ ಹೆಗಡೆ ಅವರ ಸಂಪುಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು. ವಿರೋಧ ಪಕ್ಷದ ನಾಯಕರೂ ಆಗಿದ್ದ ಕೃಷ್ಣಪ್ಪನವರು ರಂಗಕಲಾವಿಧರು ಆಗಿದ್ದರು. ಅವರ ನಿಧನದಿಂದ ನಾಡಿಗೆ ತುಂಬಲಾ ರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ.

ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ದುಖಃ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಚಿವರು ಪ್ರಾರ್ಥಿಸಿ ದ್ದಾರೆ.

Leave a Reply

Your email address will not be published. Required fields are marked *