Wednesday, 28th July 2021

ಹಿರಿಯ ರಾಜಕಾರಣಿ ಎಚ್.ಟಿ.ಕೃಷ್ಣಪ್ಪ ನಿಧನ

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಹಿರಿಯ ರಾಜಕಾರಣಿ ಎಚ್.ಟಿ.ಕೃಷ್ಣಪ್ಪ ಅವರು ಶುಕ್ರವಾರ ನಿಧನರಾದರು.

ಎಚ್.ಟಿ.ಕೃಷ್ಣಪ್ಪ ಅವರು ನಾಗಮಂಗಲ ಕ್ಷೇತ್ರದ ಶಾಸಕರಾಗಿ, ರಾಜ್ಯದ ಆರೋಗ್ಯ ಸಚಿವರಾಗಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ, ರಂಗ ಕಲಾವಿದರಾಗಿ ಅಪಾರ ಸೇವೆ ಸಲ್ಲಿಸಿದ್ದರು.

ನಾಗಮಂಗಲ ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳಿಂದ ಜನತೆಯ ಅಪಾರ ಪ್ರೀತಿ, ಅಭಿಮಾನ ಗಳಿಸಿದ್ದರು. ರಂಗಭೂಮಿ ಕಲಾವಿದರಾಗಿ ಅಪಾರ ಜನ ಮನ್ನಣೆ ಗಳಿಸಿದ್ದರು. ಮಾಜಿ ಸಚಿವ ಎಚ್.ಟಿ.ಕೃಷ್ಣಪ್ಪ ಅವರ ನಿಧನಕ್ಕೆ ಆರೋಗ್ಯ ಮತ್ತು ವೈದ್ಯ ಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತೀವ್ರ ಸಂತಾಪ ಸೂಚಿಸಿದ್ದಾರೆ.

“ಭಗವಂತ ಶ್ರೀಯುತರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಮತ್ತು ಅವರ ಕುಟುಂಬ ಸದಸ್ಯರಿಗೆ ಮತ್ತು ಅಪಾರ ಅಭಿಮಾನಿ ಬಳಗಕ್ಕೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮೂಲಕ ಶೋಕ ವ್ಯಕ್ತಪಡಿಸಿದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *