Friday, 2nd December 2022

ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು ತೆರೆ

ಹಾಸನ: ನಗರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಸನಾಂಬೆ ದೇವಿಯ ದರ್ಶನಕ್ಕೆ ಶನಿವಾರ ತೆರೆಬಿದ್ದಿದೆ. ಮಧ್ಯಾಹ್ನ ಗರ್ಭಗುಡಿಯ ಬಾಗಿಲು ಮುಚ್ಚಲಾಗಿದೆ. ಹಾಸನಾಂಬೆ ದೇಗು ಲದ ಒಳಗೆ ಪೂಜಾ ಕೈಂಕರ್ಯ ನಡೆಸಲಾಗಿದೆ.

ಹಾಸನ ಜಿಲ್ಲಾ ಉಸ್ತುವಾರಿ ಸಚಿವರು, ಹಾಸನದ ಜಿಲ್ಲಾಧಿಕಾರಿ, ಎಸ್​ಪಿ, ಆಡಳಿತಾಧಿ ಕಾರಿ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಹಾಸನಾಂಬೆ ಗರ್ಭಗುಡಿಯ ಬಾಗಿಲು ಮುಚ್ಚ ಲಾಗಿದೆ. ಮುಂದಿನ 1 ವರ್ಷದವರೆಗೆ ಹಾಸನಾಂಬೆ ದೇಗುಲದ ಬಾಗಿಲು ಮುಚ್ಚಿರ ಲಿದೆ. ಕಳೆದ 10 ದಿನಗಳಿಂದ ಲಕ್ಷಾಂತರ ಭಕ್ತರಿಂದ ಹಾಸನಾಂಬೆ ದರ್ಶನ ಪಡೆಯಲಾಗಿದ್ದು, 10ನೇ ದಿನವಾದ ಶನಿವಾರ ಗರ್ಭ ಗುಡಿ ಬಾಗಿಲು ಮುಚ್ಚಲಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಹಿತ ಹಲವು ಪ್ರಮುಖರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

ದೇವರ ದರ್ಶನ ಪಡೆದ ಬಳಿಕ ಪ್ರವೀಣ್ ಸೂದ್, ಕಾನೂನುಬಾಹಿರ ಚಟುವಟಿಕೆ ಕಂಡುಬಂದರೆ ಮಾಹಿತಿ ನೀಡಿ. ಪೊಲೀಸರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳು ತ್ತಾರೆ ಎಂದು ತಿಳಿಸಿದ್ದಾರೆ.

ಕಳೆದ ಹತ್ತು ದಿನಗಳಿಂದ ಹಾಸನಾಂಬೆ ಉತ್ಸವ ಚೆನ್ನಾಗಿ ಆಗಿದೆ. ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಎಲ್ಲರಿಗೂ ಒಳಿತಾಗಲಿ ಎಂದು ಹಾಸನಾಂಬೆ ದರ್ಶನದ ಬಳಿಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿಕೆ ನೀಡಿದ್ದಾರೆ.