ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.