Tuesday, 21st March 2023

ಮಾಜಿ ಸಿಎಂ ಕುಮಾರಸ್ವಾಮಿ ಡಿಸ್ಚಾರ್ಜ್‌

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಕರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಏಪ್ರಿಲ್ 17ರಂದು ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಸಿಗದ ಕಾರಣ, ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು.

ಟ್ವೀಟ್ ನಲ್ಲಿ ಮಾಹಿತಿ ನೀಡಿರುವ ಅವರು, ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಶನಿವಾರ ಕರೋನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು ಎಂದಿದ್ದಾರೆ.

error: Content is protected !!