ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಲಾಟರಿ ಸಿಎಂ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಐಟಿ ಸ್ವತಂತ್ರ ಸಂಸ್ಥೆಯಾಗಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತನ ಮೇಲಿನ ದಾಳಿ ರಾಜಕೀಯ ಪ್ರೇರಿತ ದಾಳಿಯಲ್ಲ. ಐಟಿ ದಾಳಿ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ಸರಿಯಲ್ಲ. . ಯಡಿಯೂರಪ್ಪಗೂ ಐಟಿದಾಳಿಗೂ ಸಂಬಂಧವಿಲ್ಲ. ನನಗಂತೂ ಯಾವ ಐಟಿ ದಾಳಿ ಭಯವೂ ಇಲ್ಲ.ಸಿದ್ದರಾಮಯ್ಯಗೂ ಐಟಿ ದಾಳಿಗೂ ಯಾವುದೇ ಸಂಬಂಧವಿಲ್ಲ. ಹೆಚ್.ಡಿ.ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾದರೂ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾದವರಲ್ಲ. ಮೊದಲಿಗೆ ಬಿಜೆಪಿಯವರಿಂದ ಎರಡನೇ ಬಾರಿ ಕಾಂಗ್ರೆಸ್ ನವರಿಂದ ಮುಖ್ಯಮಂತ್ರಿಮ್ಯಾಮ೦೦ಮ್ದಮ್ವಮಲ್ರುಜ್ಲ್ಕ . ಹತಾಶ ಮನೋಭಾವನೆಯಿಂದ ಅವರು ಹೇಳಿಕೆ ನೀಡುತ್ತಿದ್ದಾರೆ. ಕುಮಾರಸ್ವಾಮಿ ಒಬ್ಬ ಲಾಟರಿ ಸಿಎಂ ಎಂದರು.
ಯಡಿಯೂರಪ್ಪಅವರನ್ನು ಪಕ್ಷದಲ್ಲಿ ಸೈಡ್ಲೈನ್ ಮಾಡಿಲ್ಲ ಎಂಬುದನ್ನು ಒತ್ತಿ ಹೇಳಿದ ಎಂ.ಪಿ.ರೇಣುಕಾಚಾರ್ಯ, ಯಡಿಯೂರಪ್ಪರ ಪ್ರವಾಸಕ್ಕೆ ಯಾರೂ ಕಡಿವಾಣ ಹಾಕಿಲ್ಲ. ಪಕ್ಷ ಸಂಘಟನೆಗಾಗಿ ಯಡಿಯೂರಪ್ಪ ಪ್ರವಾಸ ಮಾಡಲಿದ್ದು, ಅವರೊಂದಿಗೆ ಪಕ್ಷದ ಎಲ್ಲಾ ಮುಖಂಡರೂ ಸಹ ಭಾಗಿಯಾಗಲಿದ್ದಾರೆ.ಎಲ್ಲರೂ ಸೇರಿ ತೀರ್ಮಾನ ಕೈಗೊಳ್ಳಲಿದ್ದಾರೆ. ಉಪ ಚುನಾವಣೆಯ ನಂತರ ಯಡಿಯೂರಪ್ಪ ತಂಡದ ಜೊತೆ ಪ್ರವಾಸ ಮಾಡಲಿದ್ದಾರೆ. ಯಡಿಯೂರಪ್ಪ ಅವರು ಟೀಂ ಆಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.ಒಬ್ಬರೇ ಹೋಗಿ ಪ್ರವಾಸ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ.. ಯಡಿಯೂರಪ್ಪರಿಗೆ ಸಮಿತಿಯ ನಿರ್ಧಾರದಂತೆ ಸಭಾಧ್ಯಕ್ಷರು ಸಭಾಪತಿಗಳು ಸೇರಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿದ್ದಾರೆ. ಅಧಿವೇಶನದಲ್ಲಿ ಶಿಸ್ತಿನ ಸಿಪಾಯಿ ಥರ ಯಡಿಯೂರಪ್ಪ ಹಾಜರಾಗಿದ್ದರು. ಯಡಿಯೂರಪ್ಪ ಅವರ ವಿಚಾರವನ್ನೇ ಮಾಧ್ಯಮಗಳು ಪದೇಪದೇ ಎಳೆದು ತರುವುದೂ ಸರಿಯಲ್ಲ ಎಂದು ಎಂ.ಪಿ.ರೇಣುಕಾಚಾರ್ಯ ಸ್ಪಷ್ಟಪಡಿಸಿದರು.
ಉಸ್ತುವಾರಿ ಯಾರಿಗೆ ಕೊಡಬೇಕು ಎಂಬುದನ್ನು ಸಂಘಟನೆ ತೀರ್ಮಾನ ಮಾಡುತ್ತದೆ.ವೀರಶೈವ ಲಿಂಗಾಯತ, ಒಳ ಪಂಗಡಗಳು ಎಲ್ಲಾ ಒಂದೇ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಹೊನ್ನಾಳಿಯಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ: ಕಂದಾಯ ಸಚಿವ ಆರ್.ಅಶೋಕ್ ಈ ಹಿಂದೆ ಗ್ರಾಮವಾಸ್ತವ್ಯಕ್ಕೆ ಚಾಲನೆ ಕೊಟ್ಟಿದ್ದರಾದರೂ ಕೋವಿಡ್ ನಿಂದಾಗಿ ಅದು ಸ್ಥಗಿತವಾಗಿತ್ತು.ಇದೀಗ ಮತ್ತೆ ಗ್ರಾಮವಾಸ್ತವ್ಯಕ್ಕೆ ಕಂದಾಯಸಚಿವರು ಮುಂದಾಗಿದ್ದು, ಇದೇ 16 ರಂದು ತಮ್ಮ ಮತಕ್ಷೇತ್ರ ಹೊನ್ನಾಳಿಯಲ್ಲಿ ಕಂದಾಯ ಸಚಿವರ ಮಹತ್ವ ಕಾಂಕ್ಷೆಯ ಗ್ರಾಮವಾಸ್ತವ್ಯ ಪುನರಾರಂಭಗೊಳ್ಳಲಿದೆ ಎಂದು ರೇಣುಕಾಚಾರ್ಯ ಹೇಳಿದರು.
ಹೊನ್ನಾಳಿ- ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಿಂದ ಗ್ರಾಮವಾಸ್ತವ್ಯ ಆರಂಭವಾಗಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಇದಕ್ಕೆ ಚಾಲನೆ ನೀಡಲಿದ್ದು, ಸಚಿವ ಕೆ.ಎಸ್.ಈಶ್ವರಪ್ಪ ಸಹ ಅವರೊಂದಿಗೆ ಇರಲಿದ್ದಾರೆ. ಹೊನ್ನಾಳಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಏರ್ಪಡಿಸ ಲಾಗಿದ್ದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿಗಳು ಕುಂದೂರು ಗ್ರಾಮದಲ್ಲಿ ಮಧ್ಯಾಹ್ನ 3 ಗಂಟೆಗೆ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಪ್ರಸಕ್ತ ಸರ್ಕಾರ ರೈತರು, ಕಾರ್ಮಿಕರು, ಮಹಿಳೆಯರಿಗೆ ಹಾಕಿಕೊಂಡಿರುವ ಕಾರ್ಯಕ್ರಮಗಳು ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿವಿಧ ಇಲಾಖೆಗಳಿಂದ ಏರ್ಪಡಿಸಿರುವ ಮಾಹಿತಿ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ ಎಂದರು. ಈ ಕಾರ್ಯಕ್ರಮದ ಅಂಗವಾಗಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ವಿಶೇಷ ಅಲಂಕೃತ ಚಕ್ಕಡಿಗಳಲ್ಲಿ ಸ್ಥಳೀಯ ಜಾನಪದ ಕಲಾವಿದರು ಹಾಗೂ ವಿವಿಧ ಕಲಾತಂಡಗಳೊಂದಿಗೆ ಆನೆ ಮೆರವಣಿಗೆಯೊಂದಿಗೆ ಸ್ವಾಗತಿಸಲಾಗುವುದು.
ಈ ಹಿನ್ನೆಲೆಯಲ್ಲಿ ಗ್ರಾಮ ವಾಸ್ತವ್ಯ ಈ ಹಿಂದೆ ನಡೆದ ಗ್ರಾಮವಾಸ್ತವ್ಯಗಳಿಗಿಂತ ವೈವಿಧ್ಯ ಹಾಗೂ ವಿಶಿಷ್ಟವಾಗಿರಲಿದ್ದು ಕಾರ್ಯಕ್ರಮದ ಸದುಪಯೋಗವನ್ನು ಅವಳಿ ತಾಲ್ಲೂಕುಗಳ ಸಾರ್ವಜನಿಕರಿಗೆ ಸಿಗಬೇಕೆಂಬುದು ನಮ್ಮ ಸಂಕಲ್ಪವಾಗಿದೆ ಎಂದರು. ಈ ನಿಟ್ಟಿನಲ್ಲಿ ಗ್ರಾಮಸ್ಥರು ವಿಶೇಷ ಕಾಳಜಿ ವಹಿಸಿ ಅಧಿಕಾರಿ ಗಳೊಂದಿಗೆ ಕೈ ಜೋಡಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ರೇಣುಕಾಚಾರ್ಯ ಮನವಿ ಮಾಡಿದರು.