ಬೆಂಗಳೂರು: ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಿರ್ಧಾರವನ್ನು ಟೀಕಿಸಿದ್ದಾರೆ.
ಕೋವಿಡ್ 2ನೇ ಅಲೆ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿದೆ. ಆದರೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಲಾಗಿದೆ ಎಂದು ಘೋಷಣೆ ಮಾಡಿದರು. ಹಲವು ರಾಜ್ಯಗಳು ಸಹ ಈಗಾಗಲೇ ಪರೀಕ್ಷೆಯನ್ನು ರದ್ದುಗೊಳಿಸಿವೆ.
ಆದರೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಜುಲೈನಲ್ಲಿ ಪರೀಕ್ಷೆಗಳು ನಡೆಯಲಿವೆ. ಮೂರು ಭಾಷೆಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.