Saturday, 27th February 2021

ಎಎಸ್ಐ ಆಗಿ ಪದೋನ್ನತಿ ಹೊಂದಲಿದ್ದ ಹೆಡ್’ಕಾನ್’ಸ್ಟೆಬಲ್ ಸಾವು

ಚಿಕ್ಕಮಗಳೂರು: ಬುಧವಾರ ರಾತ್ರಿ ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಗುರುವಾರ ಎಎಸ್ ಐ ಆಗಿ ಪ್ರಮಾಣ ವಚನ ಸ್ವೀಕರಿಸಬೇಕಿದ್ದ ಹೆಡ್ ಕಾನ್ ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದಲ್ಲಿನಡೆದಿದೆ.

48 ವರ್ಷದ ಸಿದ್ದರಾಮಪ್ಪ ಮೃತರು. ಬುಧವಾರ ಕರ್ತವ್ಯ ಮುಗಿಸಿ ಚಿಕ್ಕಮಗಳೂರು ನಗರಕ್ಕೆ ಹಿಂದಿರುಗು ವಾಗ ಹಿರೇಗೌಜ ಬಳಿ ಕಾರು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಮೂಲತಃ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ನಿವಾಸಿಯಾದ ಸಿದ್ದರಾಮಪ್ಪ 25 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಗುರುವಾರ ಎಎಸ್ ಐ ಆಗಿ ಬಡ್ತಿ ಪಡೆಯಲಿದ್ದರು. ಎಎಸ್ ಐ ಸಮವಸ್ತ್ರ ಕೂಡ ಸಿದ್ಧ ಮಾಡಿಕೊಂಡಿದ್ದ ಸಿದ್ದರಾಮಪ್ಪ ಕರ್ತವ್ಯ ಮುಗಿಸಿ ಖುಷಿಯಿಂದ ಮನೆಗೆ ಬರುವಾಗ ಅಪಘಾತ ಸಂಘವಿಸಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಸಖರಾಯಪಟ್ಟಣ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *