ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Curry Leaves: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆ ತಿಂದ್ರೆ ಸಿಗಲಿದೆ ಇಷ್ಟೆಲ್ಲ ಪ್ರಯೋಜನ

Curry Leaves: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಸೊಪ್ಪು ಜಗಿದು ತಿನ್ನುವುದರಿಂದ ಹಲವು ರೀತಿಯ ಆರೋಗ್ಯ ಪ್ರಯೋಜನ ಪಡೆಯಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ‌. ಕರಿಬೇವಿನ ಎಲೆಗಳಲ್ಲಿ ವಿಟಮಿನ್ ಎ, ಬಿ, ಸಿ, ಇ, ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಬೀಟಾ ಕ್ಯಾರೋಟಿನ್, ಪ್ರೊಟೀನ್, ಉರಿಯೂತದ ಗುಣ ಲಕ್ಷಣಗಳಿವೆ.

ಈ  ಸಮಸ್ಯೆಗಳಿಗೆ ಕರಿಬೇವಿನ ಎಲೆ ವರದಾನ

curry leaves

Profile Pushpa Kumari Mar 10, 2025 6:00 AM

ನವದೆಹಲಿ: ಕರಿಬೇವಿನ ಎಲೆಗಳನ್ನು (Curry Leaves) ಪ್ರತಿದಿನ ನಾವು ಅಡುಗೆಗೆ ಬಳಸುತ್ತೇವೆ. ಪ್ರಾಚೀನ ಕಾಲದಿಂದಲೂ ಹೆಚ್ಚು ಬಳಸಲ್ಪಡುವ ಕರಿಬೇವು ಔಷಧಿಯ ಗುಣವನ್ನು ಕೂಡ ಹೊಂದಿದೆ. ಅದರಲ್ಲೂ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಸೊಪ್ಪು ಜಗಿದು ತಿನ್ನುವುದರಿಂದ ಹಲವು ರೀತಿಯ ಆರೋಗ್ಯ ಪ್ರಯೋಜನ ಪಡೆಯಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ. ಕರಿಬೇವಿನ ಎಲೆಗಳಲ್ಲಿ ವಿಟಮಿನ್ ಎ, ಬಿ, ಸಿ, ಇ, ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಬೀಟಾ ಕ್ಯಾರೋಟಿನ್, ಪ್ರೊಟೀನ್, ಉರಿಯೂತದ ಗುಣಲಕ್ಷಣಗಳು ಇದ್ದು‌, ಖಾಲಿ ಹೊಟ್ಟೆಯಲ್ಲಿ ಸೇವಿಸುವು ದರಿಂದ ಜೀರ್ಣಕಾರಿ ಅಸ್ವಸ್ಥತೆಗಳನ್ನು ತಡೆಯುವುದಲ್ಲದೆ ಚರ್ಮದ ಆರೈಕೆವರೆಗೆ ನೆರವಾಗುತ್ತದೆ (Health Tips). ಹಾಗಾಗಿ ಕರಿ ಬೇವಿನ ಎಲೆಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವ ಅಭ್ಯಾಸ ರೂಢಿಸಿಕೊಳ್ಳಿ.

ತೂಕ ನಷ್ಟಕ್ಕೆ ಸಹಾಯಕಾರಿ

ಕರಿಬೇವಿನ ಎಲೆಗಳು ತೂಕ ಇಳಿಕೆಗೆ ಸಹಕಾರಿ. ಇವು ದೇಹದಲ್ಲಿನ ಅನಗತ್ಯ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತವೆ. ಕರಿಬೇವಿನ ಎಲೆಗಳಲ್ಲಿರುವ ಕಾರ್ಬಜೋಲ್ ಆಲ್ಕ ಲಾಯ್ಡ್‌ಗಳು ಸ್ಥೂಲಕಾಯ ವಿರೋಧಿ ಗುಣಗಳನ್ನು ಹೊಂದಿದ್ದು, ದೇಹದ ಕೊಬ್ಬನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಸಲಿದೆ

ಕರಿಬೇವಿನ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿದೆ. ಇವು ಗ್ಲೂಕೋಸ್ ಆಗಿ ವಿಭಜಿಸುವ ಪ್ರಕ್ರಿಯೆಯನ್ನು ನಿಧಾನಗೊಳಿಸುವ ಏಜೆಂಟ್‌ಗಳನ್ನು ಹೊಂದಿದ್ದು, ರಕ್ತದಲ್ಲಿನ ಸಕ್ಕರೆಯ ಸ್ಪೈಕ್‌ ಮಟ್ಟವನ್ನು ನಿಯಂತ್ರಿಸುತ್ತದೆ. ಮಧುಮೇಹ ಇರುವವರು ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಬಹುದು.

ಕಣ್ಣಿನ ಆರೋಗ್ಯವನ್ನು ಸುಧಾರಿಸಲಿದೆ

ಕರಿಬೇವಿನ ಎಲೆಯಲ್ಲಿ ವಿಟಮಿನ್ ಎ ಸಮೃದ್ಧವಾಗಿದ್ದು ಇದು ಉತ್ತಮ ದೃಷ್ಟಿ ಪಡೆಯಲು ಸಹಕಾರಿ. ಕರಿಬೇವಿನ ಎಲೆಗಳಲ್ಲಿ ಹೆಚ್ಚಿನ ಬೀಟಾ-ಕ್ಯಾರೋಟಿನ್ ಅಂಶವು ಕಣ್ಣಿನ ಪೊರೆ ಮತ್ತು ಇತರ ಕಣ್ಣಿನ ಕಾಯಿಲೆಗಳ ಸಮಸ್ಯೆಯನ್ನು ತಡೆಯುತ್ತದೆ. ಹಾಗಾಗಿ ದಿನ ನಿತ್ಯದ ನಿಮ್ಮ ಆಹಾರದಲ್ಲಿ ಅವುಗಳನ್ನು ಸೇರಿಸುವುದರಿಂದ ಆಕ್ಸಿಡೇಟಿವ್ ಒತ್ತಡದಿಂದ ಉಂಟಾಗುವ ಹಾನಿಯಿಂದ ನಿಮ್ಮ ಕಣ್ಣುಗಳನ್ನು ರಕ್ಷಿಸಬಹುದು.

ಕೂದಲು ಮತ್ತು ಚರ್ಮದ ಆರೋಗ್ಯಕ್ಕೆ ಉತ್ತಮ

ಕರಿಬೇವಿನ ಎಲೆಗಳು ಉತ್ಕರ್ಷಣ ನಿರೋಧಕಗಳ ಅಂಶವನ್ನು ಹೊಂದಿದ್ದು ಇವು ಕೂದಲು ಮತ್ತು ಚರ್ಮಕ್ಕೆ ಹಾನಿ ಉಂಟುಮಾಡುವ ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಅದರ ಜತೆಗೆ ಪ್ರೋಟೀನ್ ಮತ್ತು ಬೀಟಾ-ಕ್ಯಾರೋಟಿನ್ ಅಲ್ಲದೆ ವಿಟಮಿನ್ ಬಿ, ಸಿ ಮತ್ತು ಇನಂತಹ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ತಡೆಯುತ್ತದೆ. ಕರಿಬೇವಿನ ಎಲೆಗಳಲ್ಲಿರುವ ಉತ್ಕರ್ಷಣ ನಿರೋಧಕಗಳು ಮುಖದಲ್ಲಿನ ಮೊಡವೆ, ಕಲೆ ಮತ್ತು ಇತರ ಚರ್ಮದ ಅಸ್ವಸ್ಥತೆಗಳನ್ನು ಕಡಿಮೆ ಮಾಡುತ್ತದೆ.

ಹೃದಯದ ಆರೋಗ್ಯ ರಕ್ಷಣೆ

ಕರಿಬೇವಿನ ಎಲೆಗಳ ಸೇವನೆ ನಿಮ್ಮ ಹೃದಯ ರಕ್ತನಾಳದ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ. ಕರಿಬೇವಿನ ಎಲೆಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಕಾರಿ. ಹಾಗೆಯೇ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಇಲ್ಲದಾಗಿಸುತ್ತದೆ. ಇದರಲ್ಲಿನ ಹೆಚ್ಚಿನ ಫೈಬರ್ ಅಂಶವು ಆರೋಗ್ಯಕರ ರಕ್ತದೊತ್ತಡ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಒತ್ತಡ ಮತ್ತು ಆತಂಕದ ನಿಯಂತ್ರಣ

ಕರಿಬೇವಿನ ಎಲೆಗಳಲ್ಲಿರುವ ಪರಿಮಳ ಮತ್ತು ಸಾರಭೂತ ತೈಲಗಳು ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಇದು ಒತ್ತಡದ ಹಾರ್ಮೋನುಗಳ ಉತ್ಪಾದನೆಯನ್ನು ನಿಯಂತ್ರಿಸುವುದಲ್ಲದೆ ಆತಂಕದ ಮಟ್ಟವನ್ನು ಕಡಿಮೆ ಮಾಡುತ್ತದೆ. ಬೆಳಗ್ಗೆ ಕರಿಬೇವಿನ ಎಲೆಗಳನ್ನು ಸೇವಿಸುವುದರಿಂದ ನಿಮ್ಮ ದಿನವನ್ನು ಶಾಂತ ಮನಸ್ಸಿನಿಂದ ಪ್ರಾರಂಭಿಸಬಹುದು.

ಇದನ್ನು ಓದಿ: Health Benefits of Mangosteen: ಮ್ಯಾಂಗೋಸ್ಟೀನ್ ಹಣ್ಣಿನ ಸೇವನೆಯಿಂದ ಸಿಗುತ್ತೆ ಈ ಎಲ್ಲಾ ಆರೋಗ್ಯ ಲಾಭ!

ಹೇಗೆ ಸೇವಿಸಬಹುದು?

ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು ಸೇವಿಸಲು ಉತ್ತಮ ಮಾರ್ಗವೆಂದರೆ ಪ್ರತಿದಿನ ಬೆಳಿಗ್ಗೆ ತಾಜಾ ಎಲೆಗಳನ್ನು ಅಗಿಯುವುದು. ಇಲ್ಲವೆ ಪೇಸ್ಟ್ ಮಾಡಿ ಯಾವುದೇ ಪಾನೀಯದೊಂದಿಗೆ ಸೇವಿಸಬಹುದು‌. ಇನ್ನೊಂದು ವಿಧಾನವೆಂದರೆ ಎಲೆಗಳನ್ನು ನೀರಿನಲ್ಲಿ ಕುದಿಸಿ ಸೋಸಿದ ದ್ರವವನ್ನು ಚಹಾದಂತೆ ಕುಡಿಯಬಹುದು. ಒಟ್ಟಿನಲ್ಲಿ ನಿಮ್ಮ ಬೆಳಗಿನ ದಿನಚರಿಯಲ್ಲಿ ಕರಿಬೇವಿನ ಎಲೆಗಳನ್ನು ಸೇರಿಸಿಕೊಳ್ಳುವುದರಿಂದ ಸುಧಾರಿತ ಜೀರ್ಣಕ್ರಿಯೆಯಿಂದ ಹಿಡಿದು ಉತ್ತಮ ಕೂದಲು ಮತ್ತು ಚರ್ಮದ ಆರೋಗ್ಯದವರೆಗೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.