ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Cancer Vaccine: ಇನ್ನು ಆರು ತಿಂಗಳಲ್ಲಿ ಮಹಿಳೆಯರಿಗೆ ಕ್ಯಾನ್ಸರ್‌ ವ್ಯಾಕ್ಸಿನ್‌ ಲಭ್ಯ: ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹೇಳಿದ್ದೇನು?

ಮಹಿಳೆಯರನ್ನು ಬಾಧಿಸುತ್ತಿರುವ ಕ್ಯಾನ್ಸರ್‌ಗೆ ಲಸಿಕೆ ಸಿದ್ಧವಾಗಿದ್ದು, ಐದರಿಂದ ಆರು ತಿಂಗಳಲ್ಲಿ ಅದು ಲಭ್ಯವಾಗಲಿದೆ. 9 ರಿಂದ 16 ವರ್ಷ ವಯಸ್ಸಿನವರು ಲಸಿಕೆಗೆ ಅರ್ಹರಾಗಿರುತ್ತಾರೆ ಎಂದು ಕೇಂದ್ರ ಸಚಿವ ಪ್ರತಾಪ್‌ರಾವ್ ಜಾಧವ್ ಮಂಗಳವಾರ(ಫೆ.18) ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಲಸಿಕೆ ಕುರಿತಾದ ಸಂಶೋಧನೆ ಬಹುತೇಕ ಪೂರ್ಣಗೊಂಡಿದೆ. ಮತ್ತಷ್ಟು ಪ್ರಯೋಗಗಳು ಕೂಡ ನಡೆಯುತ್ತಿವೆ ಎಂದು ಹೇಳಿದರು.

ಮಹಿಳೆಯರ ಕ್ಯಾನ್ಸರ್‌ಗೆ ಲಸಿಕೆ ಸಿದ್ಧ:ಇನ್ನು ಆರು ತಿಂಗಳಲ್ಲಿ ಲಭ್ಯ!

ಸಾಂದರ್ಭಿಕ ಚಿತ್ರ

Profile Deekshith Nair Feb 18, 2025 6:08 PM

ನವದೆಹಲಿ: ಮಹಿಳೆಯರನ್ನು ಬಾಧಿಸುತ್ತಿರುವ ಸ್ತನ ಮತ್ತು ಗಂಟಲು ಕ್ಯಾನ್ಸರ್‌ಗೆ ಲಸಿಕೆ(Cancer Vaccine) ಸಿದ್ಧವಾಗಿದ್ದು, ಇನ್ನು ಐದರಿಂದ ಆರು ತಿಂಗಳಲ್ಲಿ ಅದು ಲಭ್ಯವಾಗಲಿದೆ. 9 ರಿಂದ 16 ವರ್ಷ ವಯಸ್ಸಿನವರು ಆ ಲಸಿಕೆಗೆ ಅರ್ಹರಾಗಿರುತ್ತಾರೆ ಎಂದು ಕೇಂದ್ರ ಸಚಿವ ಪ್ರತಾಪ್‌ರಾವ್ ಜಾಧವ್( Prataprao Jadhav) ಮಂಗಳವಾರ(ಫೆ.18) ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಲಸಿಕೆ ಕುರಿತಾದ ಸಂಶೋಧನೆ ಬಹುತೇಕ ಪೂರ್ಣಗೊಂಡಿದೆ. ಮತ್ತಷ್ಟು ಪ್ರಯೋಗಗಳು ಕೂಡ ನಡೆಯುತ್ತಿವೆ ಎಂದು ಹೇಳಿದರು.

ದೇಶದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಂಡಿದೆ. 30 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ತಪಾಸಣೆ ಮಾಡಿಸಬಹುದು. ರೋಗವನ್ನು ಮೊದಲೇ ಪತ್ತೆಹಚ್ಚಲು ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಅಷ್ಟೇ ಅಲ್ಲದೆ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸುವ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸರ್ಕಾರ ಈಗಾಗಲೇ ಮನ್ನಾ ಮಾಡಿದೆ ಎಂದು ಅವರು ಹೇಳಿದರು.



ಮುಂದುವರೆದು ಮಾತನಾಡಿದ ಅವರು ಮಹಿಳೆಯರ ಮೇಲೆ ಪರಿಣಾಮ ಬೀರುತ್ತಿರುವ ಕ್ಯಾನ್ಸರ್‌ಗಳನ್ನು ಗುಣಪಡಿಸುವ ಲಸಿಕೆಯ ಸಂಶೋಧನೆ ಬಹುತೇಕ ಪೂರ್ಣಗೊಂಡಿದೆ. ಇನ್ನಷ್ಟು ಪ್ರಯೋಗಗಳು ನಡೆಯುತ್ತಿವೆ. ಸ್ತನ, ಬಾಯಿ ಮತ್ತು ಗರ್ಭಕೋಶ ಕ್ಯಾನ್ಸರ್‌ನಿಂದ ಬಳಲುವ ಮಹಿಳೆಯರು ಈ ಲಸಿಕೆ ಪಡೆಯಬಹುದು ಎಂದರು.

ಈ ಸುದ್ದಿಯನ್ನೂ ಓದಿ:Tesla: ಮೋದಿ- ಮಸ್ಕ್‌ ಭೇಟಿಯ ಬೆನ್ನಲ್ಲೇ ಭಾರತದಲ್ಲಿ ಟೆಸ್ಲಾ ನೇಮಕಾತಿ ಆರಂಭ

ಆಸ್ಪತ್ರೆಗಳಲ್ಲಿ ಆಯುಷ್ ವಿಭಾಗಗಳಿವೆ ಮತ್ತು ಜನರು ಈ ಸೌಲಭ್ಯಗಳನ್ನು ಪಡೆಯಬಹುದು. ದೇಶದಲ್ಲಿ ಒಟ್ಟು 12,500 ಆರೋಗ್ಯ ಸೌಲಭ್ಯಗಳಿವೆ ಸರ್ಕಾರ ಅವುಗಳನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಜಾದವ್‌ ಹೇಳಿದರು.