ಬೆಂಗಳೂರು: ಕೊರೊನಾ ಸೋಂಕು (Corona Virus) ಇಡೀ ವಿಶ್ವವನ್ನೇ ಅಲ್ಲೋಲ ಕಲ್ಲೋಲಗೊಳಿಸಿತ್ತು. ಮನುಷ್ಯನ ಜೀವಕ್ಕೆ ಗ್ಯಾರಂಟಿಯೇ ಇಲ್ಲದಂತಾಗಿತ್ತು. ಅದರಲ್ಲೂ ಕೊರೊನಾ ಸಮಯದಲ್ಲಿ ಹತ್ತಾರು ಲಕ್ಷ ಜನ ಬಲಿಯಾಗಿದ್ದರು, ಇದೀಗ ಮತ್ತೊಂದು ವಿನಾಶಕಾರಿ ವೈರಸ್ ಜೀವ ತೆಗೆಯುತ್ತಿದೆ. ನೀರಿನ ಮೂಲಕ ದೇಹ ಸೇರುತ್ತಿರುವ ಮೆದುಳು ತಿನ್ನುವ 'ಹುಳು' ಮನುಷ್ಯರ ಪ್ರಾಣಕ್ಕೆ ಕುತ್ತು ತರುತ್ತಿದೆ. ಹೌದು ಮೆದುಳು ತಿನ್ನುವ ಅಮೀಬಾ (Brain Eating Amoeba) ಎನ್ನಲಾಗುವ ಸೋಂಕು ಕೋವಿಡ್ ಬಳಿಕ ಜನರಲ್ಲಿ ಭಾರಿ ಆತಂಕ ಮೂಡಿಸಿದೆ. ನೆಗ್ಲೇರಿಯಾ ಫೌಲೆರಿ (Naegleria fowleri) ಹೆಸರಿನ ಈ ರೋಗಕ್ಕೆ ದಕ್ಷಿಣ ಕೋರಿಯಾದಲ್ಲಿ ಮೊದಲ ಬಲಿ ವರದಿಯಾಗಿತ್ತು. ಇದೀಗ ನೆರೆಯ ಕೇರಳಕ್ಕೂ ವ್ಯಾಪಿಸಿದ್ದು, ಇದೇ ವರ್ಷ 19 ಮಂದಿ ಬಲಿಯಾಗಿದ್ದಾರೆ.
ಕೊರೊನಾ ಅಪ್ಪಳಿಸಿದ ಬಳಿಕ ಅಕ್ಷರಶಃ ನಲುಗಿ ಹೋಗಿದ್ದು, ದೇಶದಲ್ಲಿ ಜನರು ಒಂದಿಲ್ಲೊಂದು ವೈರಸ್‌ಗೆ ಬಲಿಯಾಗುತ್ತಿದ್ದಾರೆ. ಈ ಮಧ್ಯೆ ಸದ್ಯ ಕಾಣಿಸಿಕೊಂಡಿರುವ ಮೆದುಳು ತಿನ್ನುವ ಅಮೀಬಾ ಎಂಬ ವೈರಸ್ ಯಿಂದ ಎಲ್ಲೆಡೆ ಆಂತಕ ಶುರುವಾಗಿದ್ದು, ಕೇರಳದಲ್ಲಿ ಮರಣದ ಭೀತಿ ಮನೆ ಮಾಡಿದೆ. ಆದರೆ ಎಚ್ಚರಿಕೆಯಿಂದ ಇದ್ದರೆ ಈ ಮಾರಣಾಂತಿಕ ಕಾಯಿಲೆಯಿಂದ ಪಾರಾಗಬಹುದು ಎಂದು ಬೆಂಗಳೂರು ಮಣಿಪಾಲ ಆಸ್ಪತ್ರೆಯ ಹಿರಿಯ ನರ ತಜ್ಞ ವೈದ್ಯ ಶಿವಕುಮಾರ್ ಆರ್. ತಿಳಿಸಿದ್ದಾರೆ. ಈ ಮೆದುಳು ತಿನ್ನುವ ಅಮೀಬಾ ಎಂದರೆ ಏನು? ಅದು ಹೇಗೆ ಹರಡುತ್ತದೆ? ಲಕ್ಷಣಗಳೇನು? ಇತ್ಯಾದಿ ಮಾಹಿತಿಯನ್ನು ವಿಶ್ವವಾಣಿ ಹೆಲ್ತ್ ಯೂಟ್ಯೂಬ್ ಚಾನಲ್ ಜತೆ ಹಂಚಿಕೊಂಡಿದ್ದಾರೆ.
ಮೆದುಳು ತಿನ್ನುವ ಅಮೀಬಾ ವೈರಸ್ ಕುರಿತಾದ ಮಾಹಿತಿ:
ಮೆದುಳು ತಿನ್ನುವ ಅಮೀಬಾ ಎಂದರೆ ಏನು?
ನೇಗ್ಲೇರಿಯಾ ಫೌಲೆರಿ ಎಂಬುದು ಒಂದು ಬಗೆಯ ಅಮೀಬಾ ರೀತಿಯ ಜೀವಿಯಾಗಿದ್ದು, ಇದು ಸಾಮಾನ್ಯವಾಗಿ ಕೊಳಗಳು, ನದಿಗಳು, ಕೆರೆಗಳಂತಹ ನೀರಿನ ಮೂಲಗಳ ಮೂಲಕ ಹರಡುತ್ತದೆ. ಮಾಹಿತಿ ಪ್ರಕಾರ 1962ರಿಂದ ಇಲ್ಲಿಯವರೆಗೆ 154 ಜನರಲ್ಲಿ ಈ ಸೋಂಕು ಪತ್ತೆಯಾಗಿದೆ.
ಮಿನರಲ್ ವಾಟರ್ ಬಾಟಲಿಗೆ ಟ್ಯಾಪ್ ನೀರು ತುಂಬಿಸಿ ರೈಲಿನಲ್ಲಿ ಮಾರಾಟ; ವಿಡಿಯೋ ಕಂಡು ನೆಟ್ಟಿಗರು ಗರಂ!
ಲಕ್ಷಣಗಳೇನು?
ಈ ಸೋಂಕಿಗೆ ಒಳಗಾದವರಲ್ಲಿ ತೀವ್ರವಾದ ತೆಲೆನೋವು, ವಾಂತಿ, ಗಂಟಲಿನಲ್ಲಿ ಬಿಗಿತ ಹಾಗೂ ಮಂದಗೊಂಡ ಮಾತಿನ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಮನುಷ್ಯನಿಗೆ ಸೋಂಕು ತಗುಲಿದ 7-12 ದಿನಗಳಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳಲು ಆರಂಭವಾಗುತ್ತದೆ. ರೋಗದ ಲಕ್ಷಣ ತೀವ್ರವಾಗಿ ಜ್ವರ ಬರುವ ಸಾಧ್ಯತೆಯೂ ಇರುತ್ತದೆ. ಇದು ಮುಂದುವರಿದಂತೆ ವ್ಯಕ್ತಿಯಲ್ಲಿ ಸ್ನಾಯು ಸೆಳೆತಗಳು, ಭ್ರಾಂತಿ, ಕೋಮಾಗೂ ಹೋಗುವ ಸಾಧ್ಯತೆಯಿರುತ್ತದೆ. ಇದರ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗಿ ವ್ಯಕ್ತಿ 5 ದಿನಗಳಲ್ಲಿ ಸಾವನ್ನಪ್ಪುತ್ತಾನೆ ಎನ್ನಲಾಗಿದೆ.
ಹೇಗೆ ಹರಡುತ್ತದೆ?
ಈ ಜೀವಿಗಳಿರುವ ನೀರು ಮನುಷ್ಯನ ಮೂಗಿನಲ್ಲಿ ಸೇರಿಕೊಂಡರೆ, ಆತ ಸೋಂಕಿಗೆ ಒಳಗಾಗುತ್ತಾನೆ. ಇದು ಮೂಗಿನ ಮೂಲಕ ಮೆದುಳನ್ನು ಪ್ರವೇಶ ಮಾಡಿ, ಮೆದುಳಿಗೆ ಹಾನಿ ಮಾಡಲು ಪ್ರಾರಂಭಿಸುತ್ತದೆ. ಇದು ಮೆದುಳಿನ ಅಂಗಾಂಶಗಳನ್ನು ನಾಶಪಡಿಸುವುದರಿಂದ ಇದಕ್ಕೆ ಮೆದುಳು ತಿನ್ನುವ ಅಮೀಬಾ ಎಂದು ಕರೆಯಲಾಗುತ್ತದೆ. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.
ಮಾರ್ಗಸೂಚಿಯನ್ನು ಹೊರಡಿಸಿದ ಕರ್ನಾಟಕ ಸರ್ಕಾರ
ಇನ್ನು ಕೇರಳದ ಶಬರಿಮಲೆಯ ಅಯ್ಯಪ್ಪಸ್ವಾಮಿ ದರ್ಶನಕ್ಕಾಗಿ ರಾಜ್ಯದಿಂದ ಸಹಸ್ರಾರು ಭಕ್ತರು ತೆರಳುತ್ತಿದ್ದು, ಎಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಅಲ್ಲಿನ ನೀರಿನಲ್ಲಿ ಸ್ನಾನ ಮಾಡುವಾಗ ಎಚ್ಚರ ವಹಿಸುವಂತೆ ಸೂಚಿಸಲಾಗಿದ್ದು, ಯಾತ್ರೆಯ ವೇಳೆ ಅಲ್ಲಿನ ನೀರಿನಲ್ಲಿ ಸ್ನಾನ ಮಾಡುವಾಗ ಮೂಗಿನ ಒಳಗೆ ನೀರು ಪ್ರವೇಶಿಸದಂತೆ ಕ್ಲಿಪ್‌ಗಳನ್ನು ಬಳಸಿ. ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿಯಿರಿ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ರೋಗದ ಲಕ್ಷಣ ಕಂಡು ಬಂದಲ್ಲಿ ವೈದ್ಯರನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.
ಹೇಗೆ ಹರಡುತ್ತದೆ?
ಈ ಜೀವಿಗಳಿರುವ ನೀರು ಮನುಷ್ಯನ ಮೂಗಿನಲ್ಲಿ ಸೇರಿಕೊಂಡರೆ, ಆತ ಸೋಂಕಿಗೆ ಒಳಗಾಗುತ್ತಾನೆ. ಇದು ಮೂಗಿನ ಮೂಲಕ ಮೆದುಳನ್ನು ಪ್ರವೇಶ ಮಾಡಿ, ಮೆದುಳಿಗೆ ಹಾನಿಮಾಡಲು ಪ್ರಾರಂಭಿಸುತ್ತದೆ. ಇದು ಮೆದುಳಿನ ಅಂಗಾಂಶಗಳನ್ನು ನಾಶಪಡಿಸುವುದರಿಂದ ಇದಕ್ಕೆ ಮೆದುಳು ತಿನ್ನುವ ಅಮೀಬಾ ಎಂದು ಕರೆಯಲಾಗುತ್ತದೆ. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.
ಮಾರ್ಗಸೂಚಿಯನ್ನು ಹೊರಡಿಸಿದ ಕರ್ನಾಟಕ ಸರ್ಕಾರ
ಇನ್ನು ಕೇರಳದ ಶಬರಿಮಲೆಯ ಅಯ್ಯಪ್ಪಸ್ವಾಮಿ ದರ್ಶನಕ್ಕಾಗಿ ರಾಜ್ಯದಿಂದ ಸಹಸ್ರಾರು ಭಕ್ತರು ತೆರಳುತ್ತಿದ್ದು, ಎಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಅಲ್ಲಿನ ನೀರಿನಲ್ಲಿ ಸ್ನಾನ ಮಾಡುವಾಗ ಎಚ್ಚರ ವಹಿಸುವಂತೆ ಸೂಚಿಸಲಾಗಿದ್ದು, ಯಾತ್ರೆಯ ವೇಳೆ ಅಲ್ಲಿನ ನೀರಿನಲ್ಲಿ ಸ್ನಾನ ಮಾಡುವಾಗ ಮೂಗಿನ ಒಳಗೆ ನೀರು ಪ್ರವೇಶಿಸದಂತೆ ಕ್ಲಿಪ್‌ಗಳನ್ನು ಬಳಸಿ. ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿಯುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ರೋಗದ ಲಕ್ಷಣ ಕಂಡು ಬಂದಲ್ಲಿ ವೈದ್ಯರನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.