Heart Disease Prevention: ಹೃದಯದ ಆರೋಗ್ಯ ಕಾಪಾಡಲು ತಾಜಾ ಹಣ್ಣು, ತರಕಾರಿಗೆ ಇರಲಿ ಆದ್ಯತೆ
Health Tips: ನಮ್ಮ ದಿನ ನಿತ್ಯದ ಅಭ್ಯಾಸದಲ್ಲಿ ಕೆಲವು ಬದಲಾವಣೆಯನ್ನು ಮಾಡಿಕೊಳ್ಳುವ ಮೂಲಕ ಹೃದಯವನ್ನು ರಕ್ಷಿಸಬಹುದು. ಇವುಗಳಲ್ಲಿ ಮುಖ್ಯವಾಗಿ ತಾಜಾ ಹಣ್ಣು ಮತ್ತು ತರಕಾರಿಗಳನ್ನು ಸೇವಿಸುವುದು ಹೃದಯದ ಆರೋಗ್ಯವನ್ನು ಸುಧಾರಿಸಲು ಸುಲಭ ಮಾರ್ಗ. ಇವು ಜೀವಸತ್ವಗಳು, ಖನಿಜಗಳು, ಫೈಬರ್ ಮತ್ತು ನೈಸರ್ಗಿಕ ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತವೆ.
ಸಂಗ್ರಹ ಚಿತ್ರ -
ನವದೆಹಲಿ: ಹೃದಯದ ಆರೋಗ್ಯದ (Heart Health) ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ನಮ್ಮ ದಿನ ನಿತ್ಯದ ಅಭ್ಯಾಸದಲ್ಲಿ ಕೆಲವು ಬದಲಾವಣೆಯನ್ನು ಮಾಡಿಕೊಳ್ಳುವ ಮೂಲಕ ಹೃದಯವನ್ನು ಕಾಪಾಡಬಹುದು. ಮುಖ್ಯವಾಗಿ ತಾಜಾ ಹಣ್ಣು ಮತ್ತು ತರಕಾರಿಗಳನ್ನು ಸೇವಿಸುವುದು ಹೃದಯದ ಆರೋಗ್ಯವನ್ನು ಸುಧಾರಿಸಲಿರುವ ಸುಲಭಮಾರ್ಗಗಳಲ್ಲಿ ಒಂದು. ಇವು ಜೀವಸತ್ವಗಳು, ಖನಿಜಗಳು, ಫೈಬರ್ ಮತ್ತು ನೈಸರ್ಗಿಕ ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತವೆ.
ಯಾವ ರೀತಿಯ ಹಣ್ಣು ಮತ್ತು ತರಕಾರಿ ಸೇವಿಸಬೇಕು?
ನಾರು: ತರಕಾರಿಯಲ್ಲಿರುವ ನಾರಿನ ಅಂಶವು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಹೀರಿಕೊಳ್ಳುತ್ತದೆ. ಇದರಲ್ಲಿರುವ ಫೈಬರ್ ಅಂಶವು ಆರೋಗ್ಯಕರ ಜೀರ್ಣಕ್ರಿಯೆಯನ್ನು ಸಹ ಬೆಂಬಲಿಸುತ್ತದೆ ಮತ್ತು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಪೊಟ್ಯಾಸಿಯಮ್: ಹಣ್ಣು ಮತ್ತು ತರಕಾರಿಗಳು ದೇಹದಲ್ಲಿ ಸೋಡಿಯಂ ಮಟ್ಟವನ್ನು ಸಮತೋಲನಗೊಳಿಸಿ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ತಾಯಿ ಹಾಲು ಮಕ್ಕಳಿಗೆ ಅಮೃತವೇಕೆ? ವಿಜ್ಞಾನ ಹೇಳುವುದೇನು?
ಉರಿಯೂತದ ಸಂಯುಕ್ತಗಳು: ದೀರ್ಘಕಾಲದ ಉರಿಯೂತವು ಹೃದಯದ ಕಾಯಿಲೆಗೆ ಸಂಬಂಧಿಸಿದೆ. ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುವ ಮೂಲಕ ಉರಿಯೂತವನ್ನು ಕಡಿಮೆ ಮಾಡಬಹುದು.
ಉತ್ಕರ್ಷಣ ನಿರೋಧಕಗಳು: ತರಕಾರಿಗಳಲ್ಲಿ ವಿಟಮಿನ್ ಸಿ ಫ್ಲೇವನಾಯ್ಡ್‌ಗಳು ಮತ್ತು ಕ್ಯಾರೊಟಿನಾಯ್ಡ್‌ಗಳಂತಹ ಸಸ್ಯ ಸಂಯುಕ್ತಗಳು ಇರುತ್ತವೆ. ಇವು ಒತ್ತಡವನ್ನು ಕಡಿಮೆ ಮಾಡಿ ರಕ್ತನಾಳಗಳನ್ನು ರಕ್ಷಿಸುತ್ತವೆ.
ನೈಟ್ರೇಟ್‌ಗಳು: ಪಾಲಕ್, ಮೆಂತೆ, ಬೀಟ್‌ರೂಟ್‌ನಂತಹ ತರಕಾರಿಗಳು ರಕ್ತನಾಳಗಳ ಕಾರ್ಯವನ್ನು ಸುಧಾರಿಸಲು ಮತ್ತು ಆರೋಗ್ಯಕರ ರಕ್ತದೊತ್ತಡವನ್ನು ಬೆಂಬಲಿಸಲು ಸಹಾಯ ಮಾಡುತ್ತದೆ.
ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಣ: ಸೇಬು, ಕಿತ್ತಳೆ, ಪೇರಳೆ ಮತ್ತು ದ್ವಿದಳ ಧಾನ್ಯಗಳಂತಹ ಆಹಾರಗಳಲ್ಲಿ ಕಂಡುಬರುವ ಕರಗುವ ಫೈಬರ್ ಅಂಶವು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಈ ಅಭ್ಯಾಸ ಬೆಳೆಸಿಕೊಳ್ಳಿ
- ಕರಿದ ಮತ್ತು ಸಂಸ್ಕರಿಸಿದ ಆಹಾರಗಳನ್ನು ಬದಿಗೊತ್ತಿ ಮನೆಯಲ್ಲಿ ತಯಾರಿಸಿದ ತಾಜಾ ಆಹಾರ ಸೇವಿಸಿ.
- ಅತಿಯಾದ ಉಪ್ಪು ಮತ್ತು ಸಕ್ಕರೆ ಬಳಕೆಯನ್ನು ತಪ್ಪಿಸಿ.
- ದಿನದಲ್ಲಿ ಏಳು ಗಂಟೆಯ ಸಮಯದ ವರೆಗೆ ನಿದ್ದೆಗೆ ಆದ್ಯತೆ ನೀಡಿ.
- ವ್ಯಾಯಾಮ, ವಾಕಿಂಗ್ ಮಾಡುವ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ.