ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಎಂದಿನಂತೆ ಮುಂದುವರೆದಿದೆ.
ಕಳೆದೊಂದು ವಾರದಿಂದ ದಿನ ಬಿಟ್ಟು ದಿನ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಸಾಮಾನ್ಯವಾಗಿದ್ದು, ಕ್ಷಣ ಮಾತ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಪ್ರಮುಖ ಸ್ಥಳಗಳಾದ ಎಂ.ಜಿ.ರಸ್ತೆ, ಕಬ್ಬನ್ ಪಾರ್ಕ್ ರಸ್ತೆ, ಕಾರ್ಪೋರೇಷನ್ ವೃತ್ತ ಮುಂತಾದೆಡೆ, ಭಾರೀ ಮಳೆಯಿಂದ ಸಂಚಾರ ದಟ್ಟಣೆಯ ವರದಿಯಾಗಿದೆ. ಅಂಡರ್ ಪಾಸ್ ಗಳಲ್ಲಿ ನೀರು ತುಂಬಿದ್ದು ವಾಹನಗಳ ಸಂಚಾರಕ್ಕೆ ತಡೆಯೊಡ್ಡಿದೆ.
ರಾಜರಾಜೇಶ್ವರ ನಗರದಲ್ಲಿ ಗಾಳಿ ಮಳೆಗೆ, ವಾಹನ ಸಂಚಾರ ಹಾಗೂ ಜನಜೀವನ ಅಸ್ತವ್ಯಸ್ಥಗೊಂಡಿದೆ.