Friday, 2nd December 2022

ಭಾರೀ ಮಳೆಗೆ ಕುಸಿದ ಗುಡ್ಡ: ನಂದಿಗಿರಿಧಾಮದಲ್ಲಿ ರಸ್ತೆ ಸಂಚಾರ ಬಂದ್

ಚಿಕ್ಕಬಳ್ಳಾಫುರ: ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ನಂದಿ ಗಿರಿಧಾಮದ ಗುಡ್ಡಗಳು ಕುಸಿದ ಹಿನ್ನೆಲೆಯಲ್ಲಿ ನಂದಿಗಿರಿ ಧಾಮದಲ್ಲಿ ಒಂದು ವಾರ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.

ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ. ಹೀಗಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳಿಸು ತ್ತಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಗುಡ್ಡ ಕುಸಿತದಿಂದ ಗಿರಿಧಾಮದ ರಸ್ತೆ ಕೊಚ್ಚಿ ಹೋಗಿದೆ. ರಸ್ತೆ ಸಂಚಾರಕ್ಕೆ ಪೂರಕವಾಗಿ ಮಾಡಲು ಒಂದು ವಾರ ಸಮಯ ಬೇಕಾಗುತ್ತದೆ. ನಂದಿ ಗಿರಿಧಾಮದ ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿತ ಹಿನ್ನೆಲೆ ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮಣ್ಣು ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಸ್ಥಳಕ್ಕೆ ಪಿಡಬ್ಲ್ಯೂಡಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುರಿದ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ.