Thursday, 3rd December 2020

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ‘ಹೈಕೋರ್ಟ್‌’ ಜೈ

ಬೆಂಗಳೂರು: ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಗ್ರೀನ್​​ ಸಿಗ್ನಲ್ ನೀಡಿದೆ. ರಾಜ್ಯದ 58 ನಗರಸಭೆಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಗ್ರೀನ್‌ ಸಿಗ್ನಲ್‌ ನೀಡಿದೆ.

ಹಾಸನ ನಗರಸಭೆಯ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ವರ್ಗಕ್ಕೆ ಮೀಸಲು ನಿಗದಿಪಡಿಸಿರುವ ಕ್ರಮ ಪ್ರಶ್ನಿಸಿ ಹೆಚ್.ವಿ.ಚಂದ್ರೇಗೌಡ ಸೇರಿ ಹಾಸನ ವಗರ ಸಭೆಯ 21 ಮಂದಿ ಚುನಾಯಿತ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ವಾದ ಮಂಡನೆ ಮಾಡಿ, ಸರ್ಕಾರದ ಕ್ರಮವನ್ನು ನ್ಯಾಯಪೀಠದ ಮುಂದೆ ಮನ ವರಿಕೆ ಮಾಡಿಕೊಂಡು ರಾಜ್ಯ ಸರ್ಕಾರ ಮೇಲ್ಮನವಿಯನ್ನು ಅಂಗೀಕರಿಸಿದೆ. ಇದೇ ವೇಳೆ, ನವೆಂಬರ್ 2 ರೊಳಗೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *