Thursday, 23rd March 2023

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ

ಧಾರವಾಡ: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ ಮಾಡಿದರು.

ಕೆಲವು ದಿನಗಳ ಹಿಂದೆ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬುಧವಾರ ಬಸವರಾಜ ಹೊರಟ್ಟಿ ಸಹಾಯಕ ಚುನಾವಣಾಧಿಕಾರಿ, ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಗೆ ದ್ವಿಪ್ರತಿ ನಾಮಪತ್ರಗಳನ್ನು ಸಲ್ಲಿಸಿದರು.

ಮೊದಲ ಬಾರಿ ಸಲ್ಲಿಸುವಾಗ ಬಸವರಾಜ ಹೊರಟ್ಟಿ ಜೊತೆಗೆ ಪತ್ನಿ ಹೇಮಲತಾ ಹೊರಟ್ಟಿ, ಎನ್.ಎನ್.ಸವಣೂರ. ಎರಡನೇ ಬಾರಿ ನಾಮಪತ್ರ ಸಲ್ಲಿಸುವಾಗ ವಿ.ಎಸ್.ಹುದ್ದಾರ, ಶ್ಯಾಮ ಮಲ್ಲನಗೌಡರ ಉಪಸ್ಥಿತರಿದ್ದರು.

error: Content is protected !!