Wednesday, 28th July 2021

ನಾಲ್ವರು ಸಚಿವರು ಇರುವುದು ಯಾತಕ್ಕಾಗಿ: ಸತೀಶ್‌ ಜಾರಕಿಹೊಳಿ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರೇ ಎಲ್ಲ ಹೊಣೆ ಹೋರುವುದಾದರೆ ಜಿಲ್ಲೆಯ ನಾಲ್ವರು ಸಚಿವರು ಇರುವುದು ಯಾತಕ್ಕಾಗಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಪ್ರಶ್ನಿಸಿದ್ದಾರೆ.

ಮಂಗಳ ಬಿಮ್ಸ್‌ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಲು ಸ್ವತಃ ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದರು. ಈ ವಿಚಾರದಲ್ಲಿ ಜಿಲ್ಲೆಯ ಸಚಿವರುಗಳ ಬಗ್ಗೆ ಲೇವಡಿ ಮಾಡಿರುವ ಸತೀಶ್‌, ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದಾರೆ. ಎಲ್ಲವೂ ಅವರೇ ಮಾಡುವುದಾದರೆ ನಾಲ್ವರು ಸಚಿವರು ಯಾಕೆ ಬೇಕು” ಎಂದು ಟೀಕಿಸಿದರು.

ಯಾವುದೇ ಸರ್ಕಾರ ಆಡಳಿತ ನಡೆಸುವುದಾದರೂ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಅದೇ ಜಿಲ್ಲೆಯವರು ಆಗಿರಬೇಕು ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಉಸ್ತುವಾರಿ ಸಚಿವರು ಅದೇ ಜಿಲ್ಲೆಯವರಾದರೆ ಅವರಿಗೆ ಅಲ್ಲಿನ ಸಮಸ್ಯೆಗಳ ಬಗ್ಗೆ ತಿಳಿದಿರುತ್ತದೆ. ಹಾಗಾದರೆ ಸಮಸ್ಯೆ ಬಗೆಹರಿಸಲು ಸುಲಭವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಕ್ಷೇತ್ರದ ಉಪಚುನಾವಣೆಯು ಮೇ 2 ರಂದು ನಡೆದಿದ್ದು, ಬಿಜೆಪಿಯ ಮಂಗಳಾ ಸುರೇಶ್ ಅಂಗಡಿ ಎದುರು ಸತೀಶ್‌ ಜಾರಕಿಹೊಳಿ ಪರಾಭವಗೊಂಡಿದ್ದರು.

Leave a Reply

Your email address will not be published. Required fields are marked *