Tuesday, 27th July 2021

ಭಾರತ-ಶ್ರೀಲಂಕಾ: ಮೊದಲ ಏಕದಿನ ಪಂದ್ಯ ಇಂದು

ಕೋಲಂಬೋ: ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಸರಣಿಯ ಮೊದಲನೇ ಪಂದ್ಯ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿದ್ದು, ಭಾರತದ ಯುವ ಆಟಗಾರರು ಮಿಂಚಲು ಸಜ್ಜಾಗಿದ್ದಾರೆ.

ಶಿಖರ್ ಧವನ್ ನಾಯಕತ್ವದಲ್ಲಿ ತಂಡ ಕಣಕ್ಕಿಳಿಯಲಿದೆ. ಹೊಸ ಪ್ರತಿಭೆಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ. ಭಾರತ ಹಾಗೂ ಶ್ರೀಲಂಕಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ದಸುನ್ ಶನಾಕ ಅವರಿಗೆ ಶ್ರೀಲಂಕಾ ತಂಡದ ನಾಯಕತ್ವ ವಹಿಸಲಾಗಿದೆ.

ಬಲಗೈ ಗಾಯದ ಸಮಸ್ಯೆಯಿಂದ ಕುಸಲ್ ಪೆರೆರ ತಂಡದಲ್ಲಿ ಅಲಭ್ಯರಾಗಿದ್ದಾರೆ. ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದ್ದು, ಜು.25ರಿಂದ ಟಿ ಟ್ವೆಂಟಿ ಸರಣಿ ಆರಂಭವಾಗಲಿದೆ.

Leave a Reply

Your email address will not be published. Required fields are marked *