Monday, 5th December 2022

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬಸವನಬಾಗೇವಾಡಿ: ತಾಲ್ಲೂಕಿನಲ್ಲಿ 2022-23ನೇ ಸಾಲಿನಲ್ಲಿ ಒಂದರಿಂದ ಹತ್ತನೇ ವರ್ಗದಲ್ಲಿ (ಮೆಟ್ರಿಕ್ ಪೂರ್ವ) ಮತ್ತು ಮೆಟ್ರಿಕ್ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಎಸ್.ಎಸ್.ಪಿ ಪೋರ್ಟಲನಲ್ಲಿ ಅವಕಾಶ ಕಲ್ಪಿಸಲಾಗಿದೆ.

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳ ಮುಖ್ಯಸ್ಥರು, ಪಾಲಕರು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಕ್ರಮ ವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.