Friday, 7th October 2022

ಐಪಿಎಲ್ ಬೆಟ್ಟಿಂಗ್ ದಂಧೆ: ನಾಲ್ವರ ಬಂಧನ

ಹುಬ್ಬಳ್ಳಿ: ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ವೇಳೆ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸು ವಲ್ಲಿ ಯಶಸ್ವಿಯಾಗಿದ್ದಾರೆ.

ಬಸವರಾಜ ಕರಡಿ, ರಾಜು ದೊಂಗಡಿ, ವಿರುಪಕ್ಷಯ್ಯಾ ಪಾಂಚಯ್ಯ, ವೀರಭದ್ರಯ್ಯ ಕೋರಿ ಯಾನ ಮಠ ಬಂಧಿತ ಆರೋಪಿಗಳು. ಬಂಧಿತರಿಂದ 8,000 ರೂ. ನಗದು ಹಾಗೂ ನಾಲ್ಕು ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಮಾವನೂರಿನಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿ ರಮೇಶ್ ಗೋಕಾಕ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.