Monday, 8th March 2021

ಜಿಲೆಟಿನ್ ಸ್ಪೋಟ ಪ್ರಕರಣ: ಘಟನಾ ಸ್ಥಳಕ್ಕೆ ಸಚಿವರ ಭೇಟಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿಯಲ್ಲಿ ಜಿಲೆಟಿನ್ ಸ್ಪೋಟ ಸಂಭವಿಸಿದ ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಪರಿಶೀಲಿಸಿದರು.

ಸೋಮವಾರ ಮಧ್ಯರಾತ್ರಿ ಸ್ಪೋಟ ಸಂಭವಿಸಿದೆ. ಈ ವೇಳೆ ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಘಟನೆಗೆ ಕಾರಣಗಳೇನು ಎಂಬುದರ ಬಗ್ಗೆ ಮಾಹಿತಿ ಪಡೆದರು. ಘಟನೆಯಲ್ಲಿ ಮೃತರ ಆತ್ಮಕ್ಕೆ ಸಚಿವ ಬಸವರಾಜ ಬೊಮ್ಮಾಯಿ ಶಾಂತಿ ಕೋರಿದರು.

ಚಿಕ್ಕಬಳ್ಳಾಪುರದಲ್ಲಿ ಯಾವುದೇ ರೀತಿ ಅಕ್ರಮ ಗಣಿಗಾರಿಕೆ ನಡೆಯುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. ಜಿಲೆಟಿನ್ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಅವರು ಮಾತನಾಡಿದ್ದಾರೆ.

ಹಿರೇನಾಗವಲ್ಲಿ ಗ್ರಾಮದಲ್ಲಿ ಸಂಭವಿಸಿರುವ ಜಿಲೆಟಿನ್ ಸ್ಫೋಟದಿಂದಾಗಿ ಆರು ಮಂದಿ ಮೃತಪಟ್ಟಿದ್ದಾರೆ. ಜಿಲೆಟಿನ್ ಸ್ಫೋಟ ದಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಆರ್. ಗಂಗಾಧರ್, ವೇಯರ್ ಆಗಿ ರುವ ಮುರುಳಿ, ವಾಚ್ ಮೆನ್ ಮಹೇಶ್ ಹಾಗೂ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಮರವಾಸಿನಿ ಕ್ರಷರ್ ಮಾಲೀಕ ಹಾಗೂ ಸ್ಥಳೀಯ ಬಿಜೆಪಿ ಮುಖಂಡರೂ ಆಗಿರುವ ನಾಗರಾಜು, ಆಂಧ್ರ ಪ್ರದೇಶ ಮೂಲದ ಶಿವಾರೆಡ್ಡಿ ಹಾಗೂ ರಾಘವೇಂದ್ರ ರೆಡ್ಡಿ ಎಂದು ತಿಳಿದು ಬಂದಿದೆ. ಭ್ರಮರವಾಸಿನಿ ಕ್ರಷರ್ ಕಂಪನಿಯ ಮೂವರು ಮಾಲೀಕರ ಬಂಧನಕ್ಕೆ ಸಂಬಂಧಿಸಿದಂತೆ ತಂಡ ರಚಿಸಲಾಗಿದ್ದು, ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುತ್ತದೆ ಎಂದು ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *