ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ADA Recruitment 2025: ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಏಜೆನ್ಸಿಯಲ್ಲಿದೆ 137 ಹುದ್ದೆ; ಹೀಗೆ ಅಪ್ಲೈ ಮಾಡಿ

Job Guide: ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಏಜೆನ್ಸಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಿದೆ. ಒಟ್ಟು 137 ಪ್ರಾಜೆಕ್ಟ್‌ ಸೈಂಟಿಸ್ಟ್‌ ಹುದ್ದೆ ಖಾಲಿ ಇದ್ದು, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಏ. 20.

ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಏಜೆನ್ಸಿಯಲ್ಲಿದೆ 137 ಹುದ್ದೆ

ಸಾಂದರ್ಭಿಕ ಚಿತ್ರ.

Profile Ramesh B Mar 19, 2025 3:09 PM

ಬೆಂಗಳೂರು: ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲೇ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಉತ್ತಮ ಅವಕಾಶ (Job Guide). ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಏಜೆನ್ಸಿ (Aeronautical Development Agency) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಿದೆ (ADA Recruitment 2025). ಒಟ್ಟು 137 ಪ್ರಾಜೆಕ್ಟ್‌ ಸೈಂಟಿಸ್ಟ್‌ (Project Scientist) ಹುದ್ದೆ ಖಾಲಿ ಇದ್ದು, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಅನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಏ. 20.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಪ್ರಾಜೆಕ್ಟ್‌ ಸೈಂಟಿಸ್ಟ್‌ ಬಿ - 105 ಮತ್ತು ಪ್ರಾಜೆಕ್ಟ್‌ ಸೈಂಟಿಸ್ಟ್‌ ಸಿ - 32 ಹುದ್ದೆಗಳಿವೆ. ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ನೇಮಕಾತಿ ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, ಬಿಇ/ ಬಿ.ಟೆಕ್ ಅನ್ನು ಪೂರ್ಣಗೊಳಿಸಿದವರು ಮತ್ತು ಕಾರ್ಯಾನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಪ್ರಾಜೆಕ್ಟ್‌ ಸೈಂಟಿಸ್ಟ್‌ ಬಿ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 35 ವರ್ಷ ಮತ್ತು ಪ್ರಾಜೆಕ್ಟ್‌ ಸೈಂಟಿಸ್ಟ್‌ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ ಎಂದು ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: BOI Recruitment 2025: ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿದೆ 180 ಹುದ್ದೆ; ಪದವೀಧರರು ಅಪ್ಲೈ ಮಾಡಿ

ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್‌ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ ಪ್ರಾಜೆಕ್ಟ್‌ ಸೈಂಟಿಸ್ಟ್‌ ಬಿ ಹುದ್ದೆಗೆ 90,789 ರೂ. ಮತ್ತು ಪ್ರಾಜೆಕ್ಟ್‌ ಸೈಂಟಿಸ್ಟ್‌ ಸಿ ಹುದ್ದೆಗೆ 1,08,073 ರೂ. ಮಾಸಿಕ ವೇತನ ದೊರೆಯಲಿದೆ.

ADA Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
(https://ada.gov.in/adv_130

* ಹೆಸರು ನೋಂದಾಯಿಸಿ.

* ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.

* ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.

* ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.

* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ:ada.gov.inಗೆ ಭೇಟಿ ನೀಡಿ.