ಬೆಂಗಳೂರು, ಸೆ. 9: ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 2,482 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದ ದೇಶದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡ (Bank of Baroda) ಇದೀಗ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿದೆ (BOB Recruitment 2026). ಲೋಕಲ್ ಬ್ಯಾಂಕ್ ಆಫೀಸರ್ (Local Bank Officer) ಹುದ್ದೆ ಇದಾಗಿದ್ದು, ಕರ್ನಾಟಕದಲ್ಲಿ 418 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ (Job Guide). ಈ ಹಿಂದೆ ಅಪ್ಲೈ ಮಾಡಲು ಸೆಪ್ಟೆಂಬರ್ 7 ಕೊನೆಯ ದಿನಾಂಕ ಎನ್ನಲಾಗಿತ್ತು. ಇದೀಗ ಸೆಪ್ಟೆಂಬರ್ 17ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ ಮತ್ತು ಕಾರ್ಯಾನುಭವ
ಬ್ಯಾಂಕ್ ಆಫ್ ಬರೋಡದ ಅಧಿಸೂಚನೆ ಪ್ರಕಾರ ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ, ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಅಲ್ಲದೆ ಸ್ಥಳೀಯ ಭಾಷೆ ಜ್ಞಾನ ಇರಬೇಕು. ಅಂದರೆ ಓದಲು, ಬರೆಯಲು, ಮಾತನಾಡಲು ಮತ್ತು ಅರ್ಥ ಮಾಡಿಕೊಳ್ಳಲು ಬರಬೇಕು. ಜತೆಗೆ 1 ವರ್ಷದ ಕಾರ್ಯಾನುಭವ ಕಡ್ಡಾಯ.
ವಯೋಮಿತಿ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21, ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.
1,748 ಹುದ್ದೆಗಳ ಭರ್ತಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್‌ನಿಂದ ಅರ್ಜಿ ಆಹ್ವಾನ
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ/ಮಹಿಳಾ ಅಭ್ಯರ್ಥಿಗಳು 175 ರೂ. ಮತ್ತು ಸಾಮಾನ್ಯ/ಇಡಬ್ಲ್ಯುಎಸ್/ಒಬಿಎಸ್ ಅಭ್ಯರ್ಥಿಗಳು 850 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ವಿಧಾನ
ಆನ್‌ಲೈನ್ ಟೆಸ್ಟ್, ಸಂದರ್ಶನ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರವಿದೆ ಎಂದು ಪ್ರಕಟಣೆ ತಿಳಿಸಿದೆ. ಆನ್‌ಲೈನ್‌ಟೆಸ್ಟ್, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆನ್‌ಲೈನ್ ಟೆಸ್ಟ್ ತಲಾ 1 ಅಂಕಗಳಂತೆ ಒಟ್ಟು 120 ಪ್ರಶ್ನೆಯನ್ನು ಒಳಗೊಂಡಿರುತ್ತದೆ. ಇಂಗ್ಲಿಷ್ 30, ಬ್ಯಾಂಕಿಂಗ್ ನಾಲೆಡ್ಜ್ 30, ಜನರಲ್/ಎಕಾನಾಮಿಕ್ ಅವರ್ನೆಸ್ 30, ರೀಸನಿಂಗ್ ಎಬಿಲಿಟಿ & ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ 30 ಪ್ರಶ್ನೆಗಳಿರುತ್ತವೆ. ಪರೀಕ್ಷೆಯ ಅವಧಿ 120 ನಿಮಿಷ. ಗಮನಿಸಿ, ಪ್ರತಿ ತಪ್ಪುಉತ್ತರಕ್ಕೆ ನೆಗೆಟಿವ್ ಅಂಕಗಳಿರುವುದರಿಂದ ಎಚ್ಚರಿಕೆಯಿಂದ ಉತ್ತರಿಸಿ. ಕರ್ನಾಟಕದಲ್ಲಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ಕಲಬುರಗಿ, ಉಡುಪಿ, ಶಿವಮೊಗ್ಗ, ಮಂಗಳೂರು, ಬೆಳಗಾವಿಯಲ್ಲಿ ಪರೀಕ್ಷಾ ಕೇಂದ್ರವಿದೆ.
ದಿನಾಂಕ ವಿಸ್ತರಣೆಯ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
BOB Recruitment 2026 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
(ಗಮನಿಸಿ: ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಬದಲಾವಣೆ ಬಿಟ್ಟರೆ ಉಳಿದೆಲ್ಲ ಅಂಶಗಳು ಹಿಂದಿನ ಅಧಿಸೂಚನೆಯಂತೆ ಮುಂದುವರಿಯಲಿದೆ)
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ibpsreg.ibps.in/bobjul26/) - ಹೆಸರು ನೋಂದಾಯಿಸಿ.
- ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
2,536 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸ್ಟಾಫ್ ಸೆಲೆಕ್ಷನ್ ಕಮಿಷನ್
ಹೆಚ್ಚಿನ ವಿವರಗಳಿಗೆ ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್‌ಸೈಟ್ ವಿಳಾಸ: bankofbaroda.inಗೆ ಭೇಟಿ ನೀಡಿ.
ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.