ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (Industrial Development Bank of India) ವಿಶೇಷ ಕೇಡರ್ ಅಧಿಕಾರಿಗಳ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IDBI Bank Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 15 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಅಸಿಸ್ಟಂಟ್ ಜನರಲ್ ಮ್ಯಾನೇಜರ್ – 25 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಮ್ಯಾನೇಜರ್ – 31 ಹುದ್ದೆ, ವಿದ್ಯಾರ್ಹತೆ: ಪದವಿ.
ವಯೋಮಿತಿ
ಹುದ್ದೆ | ವಯೋಮಿತಿ |
ಅಸಿಸ್ಟಂಟ್ ಜನರಲ್ ಮ್ಯಾನೇಜರ್ | 28-40 ವರ್ಷ |
ಮ್ಯಾನೇಜರ್ | 25-35 ವರ್ಷ |
ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ- 3 ವರ್ಷ ಮತ್ತು ಎಸ್ / ಎಸ್‌ಟಿ ಅಭ್ಯರ್ಥಿಗಳಿಗೆ- 5 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್ ಅಭ್ಯರ್ಥಿಗಳು 1,000 ರೂ. ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು 200 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್. ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಮಾಸಿಕ ವೇತನ
ಹುದ್ದೆ | ಮಾಸಿಕ ವೇತನ |
ಅಸಿಸ್ಟಂಟ್ ಜನರಲ್ ಮ್ಯಾನೇಜರ್ | 85,920 ರೂ.-1,57,000 ರೂ. |
ಮ್ಯಾನೇಜರ್ | 64,820 ರೂ.-11,90,00 ರೂ. |
IDBI Bank Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://ibpsonline.ibps.in/idbiscomay24/)
- ಹೆಸರು ನೋಂದಾಯಿಸಿ.
- ಹೊಸ ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯ ದಾಖಲೆ, ಫೋಟೊಗಳನ್ನು ಸರಿಯಾದ ಅಳತೆಯಲ್ಲಿ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಅಪ್ಲಿಕೇಷನ್ ನಂಬರ್ ಅಥವಾ ರಿಕ್ವೆಸ್ಟ್ ನಂಬರ್ ನೋಟ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ ವಿಳಾಸ: idbibank.inಗೆ ಭೇಟಿ ನೀಡಿ.