ಬೆಂಗಳೂರು: ಸರ್ಕಾರಿ ಉದ್ಯೋಗ (Government Jobs) ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Sector) ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ (Job Seekers) ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (Ballari District Central Cooperative Bank - DCC Bank), ಹೊಸಪೇಟೆ ಉತ್ತಮ ಅವಕಾಶ ನೀಡಿದೆ. ಈ ಹಿಂದೆ ಪ್ರಕಟಿಸಿದ್ದ ನೇಮಕಾತಿ ಅಧಿಸೂಚನೆಯನ್ನು (Recruitment Notification) ಪರಿಷ್ಕರಿಸಿರುವ ಬ್ಯಾಂಕ್ ಇದೀಗ ವಿವಿಧ ವಿಭಾಗಗಳ ಒಟ್ಟು 82 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ (Kalyana Karnataka Region) ಹೆಚ್ಚಿನ ಹುದ್ದೆಗಳು ಮೀಸಲಾಗಿರುವುದು ಗಮನಾರ್ಹವಾಗಿದೆ.
ಬ್ಯಾಂಕ್ ಪ್ರಕಟಿಸಿರುವ ಅಧಿಸೂಚನೆಯ ಪ್ರಕಾರ, ವ್ಯವಸ್ಥಾಪಕರು/ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಹಾಗೂ ಕಿರಿಯ ಸೇವಕರ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
ವ್ಯವಸ್ಥಾಪಕರು/ಪ್ರಥಮ ದರ್ಜೆ ಸಹಾಯಕರು – 22 ಹುದ್ದೆಗಳು
ದ್ವಿತೀಯ ದರ್ಜೆ ಸಹಾಯಕರು – 28 ಹುದ್ದೆಗಳು
ವಾಹನ ಚಾಲಕರು – 1 ಹುದ್ದೆ
ಕಿರಿಯ ಸೇವಕರು – 31 ಹುದ್ದೆಗಳು
ಒಟ್ಟು 82 ಹುದ್ದೆಗಳಲ್ಲಿ ಬಹುತೇಕ ಹುದ್ದೆಗಳು ಕಲ್ಯಾಣ ಕರ್ನಾಟಕ ಸ್ಥಳೀಯ ಮೀಸಲಾತಿ ವೃಂದಕ್ಕೆ ಸೇರಿವೆ.
ವಿದ್ಯಾರ್ಹತೆ ಏನು?
- ವ್ಯವಸ್ಥಾಪಕರು ಹಾಗೂ ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಮಾನ್ಯ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ನಿರ್ವಹಣೆ ಮತ್ತು ಬಳಕೆಯ ಕುರಿತು ಜ್ಞಾನ ಹೊಂದಿರಬೇಕು.
- ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಕಡ್ಡಾಯವಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
- ವಾಹನ ಚಾಲಕರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಜೊತೆಗೆ ಮಾನ್ಯ ಚಾಲನಾ ಪರವಾನಗಿ ಅಗತ್ಯವಾಗಿದೆ.
- ಕಿರಿಯ ಸೇವಕರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು.
JOB ALERT: ಐಐಎಂಬಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ; 14.72 ಲಕ್ಷ ರುಪಾಯಿ ವೇತನ
ಇದಲ್ಲದೆ ಎಲ್ಲಾ ಹುದ್ದೆಗಳ ಅಭ್ಯರ್ಥಿಗಳು ಕನ್ನಡ ಭಾಷೆಯನ್ನು ಓದುವ, ಬರೆಯುವ, ಮಾತನಾಡುವ ಹಾಗೂ ಅರ್ಥೈಸಿಕೊಳ್ಳುವ ಸಾಮರ್ಥ್ಯ ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ವಯೋಮಿತಿ ಮತ್ತು ಸಡಿಲಿಕೆ
ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಲಭ್ಯವಿದೆ.
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ 1,000 ಹಾಗೂ ಎಸ್‌ಸಿ, ಎಸ್‌ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆಯ ಮೂಲಕ ನಡೆಯಲಿದ್ದು, ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ: ಜೂನ್ 1
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 30
ಹೆಚ್ಚಿನ ಮಾಹಿತಿ, ಅರ್ಜಿ ಸಲ್ಲಿಕೆ ಹಾಗೂ ಅಧಿಕೃತ ಅಧಿಸೂಚನೆಗಾಗಿ ಬಳ್ಳಾರಿ ಡಿಸಿಸಿ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ bellarydcc.bank.in ಗೆ ಭೇಟಿ ನೀಡಬಹುದು.