BOB Recruitment 2026: ಬ್ಯಾಂಕ್ ಆಫ್ ಬರೋಡದಲ್ಲಿದೆ 1,100 ಹುದ್ದೆ; ಯಾರೆಲ್ಲ ಅರ್ಜಿ ಸಲ್ಲಿಸಬಹುದು? ವಿದ್ಯಾರ್ಹತೆ ಏನು? ಇಲ್ಲಿದೆ ಇಂಚಿಂಚು ಮಾಹಿತಿ
Bank Jobs: ಬ್ಯಾಂಕ್ ಆಫ್ ಬರೋಡ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 1,100 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವೆಲ್ತ್ ಎಕ್ಸಿಕ್ಯುಟೀವ್, ಕ್ರೆಡಿಟ್ ಅನಾಲಿಸ್ಟ್ ಹುದ್ದೆ ಇದಾಗಿದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್ 24.
ಚಾಟ್‌ಜಿಪಿಟಿ ರಚಿತ ಚಿತ್ರ -
ದೆಹಲಿ, ಸೆ. 14: ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡ (Bank of Baroda) ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 1,100 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BOB Recruitment 2026). ವೆಲ್ತ್ ಎಕ್ಸಿಕ್ಯುಟೀವ್, ಕ್ರೆಡಿಟ್ ಅನಾಲಿಸ್ಟ್ ಹುದ್ದೆ ಇದಾಗಿದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು (Bank Jobs). ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್ 24 ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ವೆಲ್ತ್ ಎಕ್ಸಿಕ್ಯುಟೀವ್ 1,000 ಮತ್ತು ಕ್ರೆಡಿಟ್ ಅನಾಲಿಸ್ಟ್ 100 ಹುದ್ದೆಗಳಿವೆ. ವೆಲ್ತ್ ಎಕ್ಸಿಕ್ಯುಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವವರು ದೇಶದ ಯಾವುದೇ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಇನ್ನು ಕ್ರೆಡಿಟ್ ಅನಾಲಿಸ್ಟ್ ಹುದ್ದೆಗೆ ಸಿಎ/ಪದವಿ ಪೂರೈಸಿದವರು ಅಪ್ಲೈ ಮಾಡಬಹುದು. ಜತೆಗೆ ಕನಿಷ್ಠ 2 ವರ್ಷಗಳ ಕಾರ್ಯಾನುಭವ ಅಗತ್ಯ.
ವಯೋಮಿತಿ
ವೆಲ್ತ್ ಎಕ್ಸಿಕ್ಯುಟೀವ್ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 22 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ. ಕ್ರೆಡಿಟ್ ಅನಾಲಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 33 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಸಾಮಾನ್ಯ, ಇಡಬ್ಲ್ಯುಎಸ್, ಒಬಿಸಿ ಅಭ್ಯರ್ಥಿಗಳು 850 ರೂಪಾಯಿ, ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಇಎಸ್‌ಎಂ/ಡಿಇಎಸ್‌ಎಂ ಅಭ್ಯರ್ಥಿಗಳು 175 ರೂಪಾಯಿ ಆನ್‌ಲೈನ್ ಮೂಲಕ ಸಲ್ಲಿಸಬೇಕು.
ಬ್ಯಾಂಕ್ ಆಫ್ ಬರೋಡದ 2,482 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಅರ್ಜಿ ಸಲ್ಲಿಸುವ ವಿಧಾನ ಮತ್ತು ಮಾಸಿಕ ವೇತನ
ಅಪ್ಲಿಕೇಷನ್ ಶಾರ್ಟ್ ಲಿಸ್ಟ್, ಆನ್‌ಲೈನ್ ಟೆಸ್ಟ್, ಸೈಕೋಮೆಟ್ರಿಕ್ ಟೆಸ್ಟ್, ಗ್ರೂಪ್ ಡಿಸ್ಕಷನ್ / ವೈಯಕ್ತಿಕ ಸಂದರ್ಶನ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ವೆಲ್ತ್ ಎಕ್ಸಿಕ್ಯುಟೀವ್ ಹುದ್ದೆಗಳಿಗೆ 48,480 ರೂಪಾಯಿ, ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳಿಗೆ 64,820 ರೂಪಾಯಿ ಮಾಸಿಕ ವೇತನವಿದೆ.
BOB Recruitment 2026 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ibpsreg.ibps.in/bonwejul26/) - ಹೆಸರು ನೋಂದಾಯಿಸಿ. ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ. ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್‌ಸೈಟ್ ವಿಳಾಸ: bankofbaroda.inಗೆ ಭೇಟಿ ನೀಡಿ.
ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.