ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BEML Recruitment 2025: ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ನಲ್ಲಿದೆ 682 ಹುದ್ದೆ; 10ನೇ ತರಗತಿ ಪಾಸಾದವರು ಅಪ್ಲೈ ಮಾಡಿ

Job Guide: ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನಾನ್‌ ಎಕ್ಸಿಕ್ಯುಟಿವ್‌ ಹುದ್ದೆಗಳಿಗೆ ಸೆಪ್ಟೆಂಬರ್‌ 5 ಮತ್ತು ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆಗಳಿಗೆ ಸೆಪ್ಟೆಂಬರ್‌ 12.

ದೆಹಲಿ: ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ (Bharat Earth Movers Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BEML Recruitment 2025). ದೇಶಾದ್ಯಂತ ಒಟ್ಟು 682 ನಾನ್‌ ಎಕ್ಸಿಕ್ಯುಟಿವ್‌, ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆಗಳಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (Job Guide). ಐಟಿಐ, ಡಿಪ್ಲೊಮಾ, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ನಾನ್‌ ಎಕ್ಸಿಕ್ಯುಟಿವ್‌ ಹುದ್ದೆಗಳಿಗೆ ಸೆಪ್ಟೆಂಬರ್‌ 5 ಮತ್ತು ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆಗಳಿಗೆ ಸೆಪ್ಟೆಂಬರ್‌ 12.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಚೀಫ್‌ ಜನರಲ್‌ ಮ್ಯಾನೇಜರ್‌, ಹುದ್ದೆ: 3, ವಿದ್ಯಾರ್ಹತೆ: ಎಲ್‌ಎಲ್‌ಬಿ, ಬಿಇ ಅಥವಾ ಬಿ.ಟೆಕ್‌, ಎಂಎ, ಎಂಬಿಎ, ಸ್ನಾತಕೋತ್ತರ ಪದವಿ

ಜನರಲ್‌ ಮ್ಯಾನೇಜರ್‌, ಹುದ್ದೆ: 2, ವಿದ್ಯಾರ್ಹತೆ: ಸಿಎ, ಸಿಎಂಎ, ಎಂಬಿಎ

ಡೆಪ್ಯುಟಿ ಜನರಲ್‌ ಮ್ಯಾನೇಜರ್‌, ಹುದ್ದೆ: 9, ವಿದ್ಯಾರ್ಹತೆ: ಬಿಇ ಅಥವಾ ಬಿಟೆಕ್‌

ಮ್ಯಾನೇಜರ್‌, ಹುದ್ದೆ: 1, ವಿದ್ಯಾರ್ಹತೆ: ಬಿಇ ಅಥವಾ ಬಿಟೆಕ್‌

ಅಸಿಸ್ಟಂಟ್‌ ಮ್ಯಾನೇಜರ್‌, ಹುದ್ದೆ: 10, ವಿದ್ಯಾರ್ಹತೆ: ಬಿಇ ಅಥವಾ ಬಿಟೆಕ್‌, ಸ್ನಾತಕೋತ್ತರ ಪದವಿ

ಮ್ಯಾನೇಜರ್‌ / ಅಸಿಸ್ಟಂಟ್‌ ಮ್ಯಾನೇಜರ್‌ (ರಾಜ್‌ ಭಾಷಾ), ಹುದ್ದೆ: 1, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ, ಪಿಚ್‌ಡಿ

ಮ್ಯಾನೇಜ್‌ಮೆಂಟ್‌ ಟ್ರೈನಿ, ಹುದ್ದೆ: 100, ವಿದ್ಯಾರ್ಹತೆ: ಬಿಇ ಅಥವಾ ಬಿಟೆಕ್‌

ಸೆಕ್ಯುರಿಟಿ ಗಾರ್ಡ್‌, ಹುದ್ದೆ: 44, ವಿದ್ಯಾರ್ಹತೆ: 10ನೇ ತರಗತಿ

ಫೈರ್‌ ಸರ್ವಿಸ್‌ ಪರ್ಸನಲ್‌, ಹುದ್ದೆ: 12, ವಿದ್ಯಾರ್ಹತೆ: 10ನೇ ತರಗತಿ

ಸ್ಟಾಫ್‌ ನರ್ಸ್‌, ಹುದ್ದೆ: 10, ವಿದ್ಯಾರ್ಹತೆ: 10ನೇ ತರಗತಿ, ಡಿಪ್ಲೊಮಾ, ಬಿಎಸ್‌ಸಿ

ಫಾರ್ಮಸಿಸ್ಟ್‌, ಹುದ್ದೆ: 4, ವಿದ್ಯಾರ್ಹತೆ: 12ನೇ ತರಗತಿ, ಡಿಪ್ಲೊಮಾ

ನಾನ್‌ ಎಕ್ಸಿಕ್ಯುಟಿವ್‌ (ಡಿಪ್ಲೊಮಾ & ಐಟಿ), ಹುದ್ದೆ: 46, ವಿದ್ಯಾರ್ಹತೆ: ಐಟಿಐ, ಡಿಪೊಮಾ

ನಾನ್‌ ಎಕ್ಸಿಕ್ಯುಟಿವ್‌ (ಐಟಿಐ), ಹುದ್ದೆ: 440, ವಿದ್ಯಾರ್ಹತೆ: ಐಟಿಐ

ಗಮನಿಸಿ ಅರ್ಜಿ ಸಲ್ಲಿಸಲು ನಾನ್‌ ಎಕ್ಸಿಕ್ಯುಟಿವ್‌ (ಐಟಿಐ) ಹುದ್ದೆಗೆ ಸೆಪ್ಟೆಂಬರ್‌ 5 ಕೊನೆಯ ದಿನವಾದರೆ, ಉಳಿದೆಲ್ಲ ಹುದ್ದೆಗಳಿಗೆ ಸೆಪ್ಟೆಂಬರ್‌ 12ರೊಳಗೆ ಅಪ್ಲೈ ಮಾಡಬೇಕು.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಚೀಫ್‌ ಜನರಲ್‌ ಮ್ಯಾನೇಜರ್‌, ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆಗಳಿಗೆ ಜನರಲ್‌ / ಇಡಬ್ಲ್ಯುಎಸ್‌ / ಒಬಿಸಿ ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸ್ಟಾಫ್‌ ನರ್ಸ್‌, ನಾನ್‌ ಎಕ್ಸಿಕ್ಯುಟಿವ್‌ ಮತ್ತು ಇತರ ಹುದ್ದೆಗಳಿಗೆ ಜನರಲ್‌ / ಇಡಬ್ಲ್ಯುಎಸ್‌ / ಒಬಿಸಿ ಅಭ್ಯರ್ಥಿಗಳು 200 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಪಾವತಿ ವಿಧಾನ: ಆನ್‌ಲೈನ್‌.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ನಾನ್‌ ಎಕ್ಸಿಕ್ಯುಟಿವ್‌ ಹುದ್ದೆಗಳ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆಗಳ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (https://cbtexam.bemlindia.in/)
  • ಹೆಸರು ನೋಂದಾಯಿಸಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: bemlindia.inಗೆ ಭೇಟಿ ನೀಡಿ.