ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

BESCOM Recruitment: ಬೆಸ್ಕಾಂನಲ್ಲಿದೆ ಉದ್ಯೋಗಾವಕಾಶ; ಬಿಇ, ಡಿಪ್ಲೊಮಾ, ಪದವೀಧರರು ಅಪ್ಲೈ ಮಾಡಿ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಒಂದು ವರ್ಷದ ಅವಧಿಗೆ ಒಟ್ಟು 520 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ, ಪದವೀಧರ ಹಾಗೂ ಡಿಪ್ಲೊಮಾ ಅರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆ ಮೆರಿಟ್ ಆಧಾರದ ಮೇಲೆ ನಡೆಯಲಿದೆ. ಅರ್ಜಿ ಸಲ್ಲಿಕೆ ಫೆಬ್ರವರಿ 12ರಿಂದ ಆರಂಭವಾಗಿದ್ದು, ಮಾರ್ಚ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ bescom.karnataka.gov.inಗೆ ಭೇಟಿ ನೀಡಬಹುದು.

ಸಾಂದರ್ಭಿಕ ಚಿತ್ರ.

ಬೆಂಗಳೂರು, ಫೆ. 25: ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತದಲ್ಲಿ (Bangalore Electricity Supply Company Limited) ಖಾಲಿ ಇರುವ ಅಪ್ರೆಂಟಿಸ್ (​Apprentice) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 520 ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದೆ. ಒಂದು ವರ್ಷದ ಈ ಅಪ್ರೆಂಟಿಸ್​ ಅವಧಿಯಲ್ಲಿ ಮಾಸಿಕ ಸ್ಟೈಫಂಡ್​ ಕೂಡ ನೀಡಲಾಗುವುದು. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮಾರ್ಚ್​ 10 ಆಗಿದೆ.

ಹುದ್ದೆಗಳ ಸಂಪೂರ್ಣ ವಿವರ

ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 520 ಹುದ್ದೆಗಳು ಭರ್ತಿಯಾಗಲಿವೆ. ಅವುಗಳ ವಿಭಾಗವಾರು ಹುದ್ದೆಗಳ ಸಂಖ್ಯೆ ಹೀಗಿದೆ:

ತಾಂತ್ರಿಕ ಅಪ್ರೆಂಟಿಸ್ (Technical Apprentice)–130 ಹುದ್ದೆಗಳು

ಪದವೀಧರ ಅಪ್ರೆಂಟಿಸ್ (Graduate Apprentice)–315 ಹುದ್ದೆಗಳು

ಡಿಪ್ಲೊಮಾ ಅಪ್ರೆಂಟಿಸ್ (Diploma Apprentice)–75 ಹುದ್ದೆಗಳು

ವಿದ್ಯಾರ್ಹತೆ

  • ತಾಂತ್ರಿಕ ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ, ಬಿ.ಟೆಕ್​ ಪದವಿ ಹೊಂದಿರಬೇಕು.
  • ಪದವೀಧರ ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎ, ಬಿಎಸ್‌ಸಿ, ಬಿಕಾಂ, ಬಿಬಿಎ, ಬಿಸಿಎ ವಿದ್ಯಾರ್ಹತೆ ಪಡೆದಿರಬೇಕು.
  • ಡಿಪ್ಲೊಮಾ ಅಪ್ರೆಂಟಿಸ್​​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ ಪದವಿ ಹೊಂದಿರಬೇಕು.

ಬೆಂಗಳೂರು ಸೇರಿ ದೇಶಾದ್ಯಂತ 650 ಅಸಿಸ್ಟಂಟ್‌ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ ಆರ್‌ಬಿಐ

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸು ತುಂಬಿರಬೇಕು.

ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಕೆಳಗಿನ ಕ್ರಮವನ್ನು ಅನುಸರಿಸಿ ಅರ್ಜಿ ಸಲ್ಲಿಸಬೇಕು:
  • ಮೊದಲು ನ್ಯಾಷನಲ್ ಅಪ್ರೆಂಟಿಸ್ ವೆಬ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.
  • ಬಳಿಕ ಬೆಸ್ಕಾಂ ಅಧಿಕೃತ ಜಾಲತಾಣದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
  • ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ವಿಧಿಸಲಾಗುವುದಿಲ್ಲ.
  • ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳ ಆಯ್ಕೆ ಮೆರಿಟ್ ಆಧಾರದ ಮೇಲೆ ನಡೆಯಲಿದೆ. ವಿದ್ಯಾರ್ಹತೆ ಮತ್ತು ಶೈಕ್ಷಣಿಕ ಅಂಕಗಳ ಆಧಾರದಲ್ಲಿ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ಪ್ರಮುಖ ದಿನಾಂಕಗಳು

  • ಅರ್ಜಿ ಪ್ರಾರಂಭ ದಿನಾಂಕ: ಫೆಬ್ರವರಿ 12
  • ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: ಮಾರ್ಚ್ 10

ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗೆ

ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿ, ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬೆಸ್ಕಾಂ ಅಧಿಕೃತ ವೆಬ್‌ಸೈಟ್‌ಗೆ bescom.karnataka.gov.in ಭೇಟಿ ನೀಡಬಹುದು.