ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

SBI Recruitment 2026: ಎಸ್‌ಬಿಐಯಲ್ಲಿದೆ ಬರೋಬ್ಬರಿ 1,576 ಹುದ್ದೆ; ಪದವಿ ವಿದ್ಯಾರ್ಹತೆ ಹೊಂದಿದವರು ಇಂದೇ ಅಪ್ಲೈ ಮಾಡಿ

Bank Jobs: ಸಾರ್ವಜನಿಕ ವಲಯದ ಭಾರತದ ಅತಿದೊಡ್ಡ ಬ್ಯಾಂಕ್‌ ಎಸ್‌ಬಿಐ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 1,576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜ್ಯೂನಿಯರ್‌ ಅಸೋಸಿಯೇಟ್‌, ಡೆಪ್ಯುಟಿ ವೈಸ್‌ ಪ್ರೆಸಿಡೆಂಟ್‌, ಡೆಪ್ಯುಟಿ ಮ್ಯಾನೇಜರ್‌ ಸೇರಿ ಹಲವು ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 27.

ಚಾಟ್‌ಜಿಪಿಟಿ ರಚಿತ ಚಿತ್ರ

ಬೆಂಗಳೂರು, ಆ. 9: ಪದವಿ ಮುಗಿಸಿ ಬ್ಯಾಂಕ್‌ ಉದ್ಯೋಗ (Bank Jobs) ಹೊಂದಬೇಕು ಎನ್ನುವ ಕನಸು ಕಾಣುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಸಾರ್ವಜನಿಕ ವಲಯದ ಭಾರತದ ಅತಿದೊಡ್ಡ ಬ್ಯಾಂಕ್‌ ಎಸ್‌ಬಿಐ (State Bank of India) ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 1,576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SBI Recruitment 2026). ಜ್ಯೂನಿಯರ್‌ ಅಸೋಸಿಯೇಟ್‌, ಡೆಪ್ಯುಟಿ ವೈಸ್‌ ಪ್ರೆಸಿಡೆಂಟ್‌, ಡೆಪ್ಯುಟಿ ಮ್ಯಾನೇಜರ್‌ ಸೇರಿ ಹಲವು ಹುದ್ದೆಗಳಿವೆ. ಕರ್ನಾಟಕದಲ್ಲಿಯೇ 120ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ (Job Guide). ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 27.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

  • ಜ್ಯೂನಿಯರ್‌ ಅಸೋಸಿಯೇಟ್‌: 1,538 ಹುದ್ದೆ, ವಿದ್ಯಾರ್ಹತೆ: ಪದವಿ.
  • ಡೆಪ್ಯುಟಿ ವೈಸ್‌ ಪ್ರೆಸಿಡೆಂಟ್‌: 4 ಹುದ್ದೆ, ವಿದ್ಯಾರ್ಹತೆ: ಬಿಇ, ಎಂಇ, ಎಂ.ಎಸ್‌ಸಿ, ಎಂಸಿಎ.
  • ಡೆಪ್ಯುಟಿ ಮ್ಯಾನೇಜರ್‌: 30 ಹುದ್ದೆ, ವಿದ್ಯಾರ್ಹತೆ: ಬಿಇ, ಎಂಇ, ಎಂ.ಎಸ್‌ಸಿ, ಎಂಸಿಎ.
  • ಮ್ಯಾನೇಜರ್‌: 2 ಹುದ್ದೆ, ವಿದ್ಯಾರ್ಹತೆ: ಎಂಬಿಎ/ಪಿಜಿಡಿಎಂ/ಪಿಜಿಡಿಬಿಎಂ.
  • ಡೆಪ್ಯುಟಿ ಚೀಫ್‌ ಟೆಕ್ನಾಲಜಿ ಆಫೀಸರ್‌: 1 ಹುದ್ದೆ, ವಿದ್ಯಾರ್ಹತೆ: ಪದವಿ, ಬಿಇ, ಎಂಇ, ಎಂಸಿಎ.
  • ವೈಸ್‌ ಪ್ರೆಸಿಡೆಂಟ್‌: 1 ಹುದ್ದೆ, ವಿದ್ಯಾರ್ಹತೆ: ಪದವಿ, ಬಿಇ, ಎಂಇ, ಎಂಸಿಎ.

319 ಕೆಎಎಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ; ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 20ರಿಂದ 48 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.

SBI Recruitment

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಇನ್ನು ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

ಜ್ಯೂನಿಯರ್‌ ಅಸೋಸಿಯೇಟ್‌ ಹುದ್ದೆಗಳ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಸ್ಪೆಷಲಿಸ್ಟ್‌ ಆಫೀಸರ್‌ (ಕಾಂಟ್ರಾಕ್ಟ್‌) ಹುದ್ದೆಗಳ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

ಆನ್‌ಲೈನ್‌ ಪ್ರಿಮಿಲಿನರಿ ಪರೀಕ್ಷೆ, ಆನ್‌ಲೈನ್‌ ಮೈನ್‌ ಪರೀಕ್ಷೆ, ಲೋಕಲ್‌ ಲಾಂಗ್ವೇಜ್‌ ಪರೀಕ್ಷೆ (Local Language Proficiency Test), ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಶಾರ್ಟ್‌ ಲಿಸ್ಟ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಪ್ರಿಮಿಲಿನರಿ ಪರೀಕ್ಷೆ ಸೆಪ್ಟೆಂಬರ್‌ನಲ್ಲಿ ಮತ್ತು ಮುಖ್ಯ ಪರೀಕ್ಷೆ ಅಕ್ಟೋಬರ್‌/ನವೆಂಬರ್‌ನಲ್ಲಿ ಆಯೋಜಿಸುವ ಸಾಧ್ಯತೆ ಇದೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಅರ್ಜಿ ಸಲ್ಲಿಕೆ ದಿನಾಂಕ ಮತ್ತೊಮ್ಮೆ ವಿಸ್ತರಣೆ

ಅರ್ಜಿ ಸಲ್ಲಿಸುವ ವಿಧಾನ

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: sbi.co.inಗೆ ಭೇಟಿ ನೀಡಿ.

ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author