ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BOB Recruitment 2025: 10ನೇ ತರಗತಿ ಪಾಸಾದವರಿಗೆ ಬಂಪರ್‌ ಚಾನ್ಸ್‌; ಬ್ಯಾಂಕ್‌ ಆಫ್‌ ಬರೋಡಾದಲ್ಲಿದೆ ಬರೋಬ್ಬರಿ 500 ಹುದ್ದೆ

Job Guide: ದೇಶದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಬರೋಡಾ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 500 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಫೀಸ್‌ ಅಸಿಸ್ಟಂಟ್‌ ಹುದ್ದೆ ಇದಾಗಿದ್ದು, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲಿ ಒಟ್ಟು 31 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 23 ಎಂದು ಪ್ರಕಟಣೆ ತಿಳಿಸಿದೆ.

ಬ್ಯಾಂಕ್‌ ಆಫ್‌ ಬರೋಡಾದಲ್ಲಿದೆ ಬರೋಬ್ಬರಿ 500 ಹುದ್ದೆ

ಸಾಂದರ್ಭಿಕ ಚಿತ್ರ.

Profile Ramesh B May 3, 2025 3:02 PM

ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ (Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ದೇಶದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಬರೋಡಾ (Bank of Baroda) ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 500 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BOB Recruitment 2025). ಆಫೀಸ್‌ ಅಸಿಸ್ಟಂಟ್‌ ಹುದ್ದೆ ಇದಾಗಿದ್ದು, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು (Job Guide). ಕರ್ನಾಟಕದಲ್ಲಿ ಒಟ್ಟು 31 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 23 ಎಂದು ಪ್ರಕಟಣೆ ತಿಳಿಸಿದೆ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಆಫೀಸ್‌ ಅಸಿಸ್ಟಂಟ್‌ (ಪಿಯೋನ್‌) ಹುದ್ದೆ ಇದಾಗಿದ್ದು, ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು. ಜತೆಗೆ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಸ್ಥಳೀಯ ಭಾಷೆಯನ್ನು ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 26 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ‌ ಸಾಮಾನ್ಯ/ಇಡಬ್ಲ್ಯುಎಸ್‌ ಮತ್ತು ಒಬಿಸಿ ಅಭ್ಯರ್ಥಿಗಳು 600 ರೂ., ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಮಾಜಿ ಯೋಧರು/ಮಹಿಳಾ ಅಭ್ಯರ್ಥಿಗಳು 100 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆನ್‌ಲೈನ್‌ ಟೆಸ್ಟ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಪರೀಕ್ಷೆಯು 100 ಅಂಕಗಳಿಗೆ ನಡೆಯಲಿದೆ. 80 ನಿಮಿಷ ಅವಧಿಯ ಪರೀಕ್ಷೆಯಲ್ಲಿ ನಾಲೆಡ್ಜ್‌ ಆಫ್‌ ಇಂಗ್ಲಿಷ್‌ ಲ್ಯಾಂಗ್ವೇಜ್‌, ಜನರಲ್‌ ಅವೆರ್‌ನೆಸ್‌, ಎಲೆಮೆಂಟ್ರಿ ಅರ್ಥಮೆಟಿಕ್‌, ಸೈಕೋಮೆಟ್ರಿಕ್‌ ಟೆಸ್ಟ್‌ (ರೀಸನಿಂಗ್‌) ಪ್ರಶ್ನೆಗಳಿರುತ್ತವೆ. ಕರ್ನಾಟಕದಲ್ಲಿ ಬೆಂಗಳೂರು, ಹುಬ್ಬಳ್ಳಿ/ಧಾರವಾಡ, ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಈ ಸುದ್ದಿಯನ್ನೂ ಓದಿ: BPNL Recruitment 2025: 10ನೇ ತರಗತಿ ಪಾಸಾದವರಿಗೆ ಬಂಪರ್‌ ಚಾನ್ಸ್‌; ಭಾರತೀಯ ಪಶುಪಾಲನ್‌ ನಿಗಮ್‌ ಲಿಮಿಟೆಡ್‌ನಲ್ಲಿದೆ ಬರೋಬ್ಬರಿ 12,981 ಹುದ್ದೆ

BOB Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
(https://ibpsonline.ibps.in/bobapr25/)

* ಹೆಸರು ನೋಂದಾಯಿಸಿ.

* ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.

* ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.

* ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.

* ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.

* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಬ್ಯಾಂಕ್‌ ಆಫ್‌ ಬರೋಡಾದ ಅಧಿಕೃತ ವೆಬ್‌ಸೈಟ್‌ ವಿಳಾಸ: bankofbaroda.inಕ್ಕೆ ಭೇಟಿ ನೀಡಿ.