ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

BOB Recruitment 2026: ಬ್ಯಾಂಕ್‌ ಆಫ್‌ ಬರೋಡದಲ್ಲಿದೆ 166 ಹುದ್ದೆ; ವಿದ್ಯಾರ್ಹತೆ, ಅಪ್ಲೈ ಮಾಡುವ ವಿಧಾನ ಇಲ್ಲಿದೆ

Bank of Baroda: ಪದವೀಧರರಿಗೆ ಗುಡ್‌ನ್ಯೂಸ್‌. ಬ್ಯಾಂಕ್‌ ಆಫ್‌ ಬರೋಡ ಖಾಲಿ ಇರುವ ವಿವಿಧ ಹುದ್ದಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸೀನಿಯರ್‌ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಕ್ರಡಿಟ್‌ ಅನಾಲಿಸ್ಟ್‌ ಸೇರಿದಂತೆ ಒಟ್ಟು 166 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಫೆಬ್ರವರಿ 26.

ಬ್ಯಾಂಕ್‌ ಆಫ್‌ ಬರೋಡದಲ್ಲಿದೆ 166 ಹುದ್ದೆ

ಸಾಂದರ್ಭಿಕ ಚಿತ್ರ. -

Ramesh Ballamoole
Ramesh Ballamoole Feb 12, 2026 3:21 PM

ಬೆಂಗಳೂರು, ಫೆ. 12: ಬ್ಯಾಂಕ್‌ ಆಫ್‌ ಬರೋಡ (Bank of Baroda) ಖಾಲಿ ಇರುವ ವಿವಿಧ ಹುದ್ದಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BOB Recruitment 2026). ಸೀನಿಯರ್‌ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಕ್ರಡಿಟ್‌ ಅನಾಲಿಸ್ಟ್‌ ಸೇರಿದಂತೆ ಒಟ್ಟು 166 ಹುದ್ದೆಗಳಿವೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆ ತಿಳಿಸಿದೆ (Bank Jobs). ಉದ್ಯೋಗ ಸ್ಥಳ: ದೇಶಾದ್ಯಂತ (Job Guide). ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಫೆಬ್ರವರಿ 26.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸೀನಿಯರ್‌ ಮ್ಯಾನೇಜರ್‌ ಎಂಎಸ್‌ಎಂಇ ರಿಲೇಷನ್‌ಶಿಪ್‌-113, ಸೀನಿಯರ್‌ ಮ್ಯಾನೇಜರ್‌ ಕ್ರೆಡಿಟ್‌ ಅನಾಲಿಸ್ಟ್‌-19 ಮತ್ತು ಮ್ಯಾನೇಜರ್‌ ಕ್ರೆಡಿಟ್‌ ಅನಾಲಿಸ್ಟ್‌-34 ಹುದ್ದೆಳಿವೆ. ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಫುಲ್‌ ಟೈಮ್‌ ಎಂಬಿಎ/ಪಿಜಿಡಿಎಂ, ಸಿಎ ಮಾಡಿದವರಿಗೆ ಆದ್ಯತೆ. ಜತೆಗೆ 3ರಿಂದ 8 ವರ್ಷಗಳ ಕಾರ್ಯಾನುಭವ ಕಡ್ಡಾಯ.

ವಯೋಮಿತಿ

ಸೀನಿಯರ್‌ ಮ್ಯಾನೇಜರ್‌ ಎಂಎಸ್‌ಎಂಇ ರಿಲೃಷನ್‌ ಶಿಪ್‌ ಹುದ್ದೆಗೆ ಕನಿಷ್ಠ ವಯಸ್ಸು 30, ಗರಿಷ್ಠ ವಯಸ್ಸು 40 ವರ್ಷ, ಸೀನಿಯರ್‌ ಮ್ಯಾನೇಜರ್‌ ಕ್ರೆಡಿಟ್‌ ಅನಾಲಿಸ್ಟ್‌ ಹುದ್ದೆಗೆ ಕನಿಷ್ಠ ವಯಸ್ಸು 24, ಗರಿಷ್ಠ ವಯಸ್ಸು 34 ವರ್ಷ ಮತ್ತು ಮ್ಯಾನೇಜರ್‌ ಕ್ರೆಡಿಟ್‌ ಅನಾಲಿಸ್ಟ್‌ ಹುದ್ದಗೆ ಕನಿಷ್ಠ ವಯಸ್ಸು 25, ಗರಿಷ್ಠ ವಯಸ್ಸು 34 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ/ಮಹಿಳಾ ಅಭ್ಯರ್ಥಿಗಳು 175 ರೂ. ಮತ್ತು ಸಾಮಾನ್ಯ/ಇಡಬ್ಲ್ಯುಎಸ್‌/ಒಬಿಎಸ್‌ ಅಭ್ಯರ್ಥಿಗಳು 850 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

ಬೆಂಗಳೂರಿನ ಚಾರ್ಟರ್ಡ್‌ ಸಹಕಾರಿ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ

ಆಯ್ಕೆ ವಿಧಾನ

ಆನ್‌ಲೈನ್‌ ಟೆಸ್ಟ್‌, ಸಂದರ್ಶನ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರವಿದೆ ಎಂದು ಪ್ರಕಟಣೆ ತಿಳಿಸಿದೆ.

BOB Recruitment 2026 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (https://bankappsweb.bankofbaroda.bank.in/BOBRECRUITMENT_FEB_MSMER2608825/)
  • ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ. ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಬ್ಯಾಂಕ್‌ ಆಫ್‌ ಬರೋಡಾದ ಅಧಿಕೃತ ವೆಬ್‌ಸೈಟ್‌ ವಿಳಾಸ: bankofbaroda.inಗೆ ಭೇಟಿ ನೀಡಿ.

ಉದ್ಯೋಗ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.