ದೆಹಲಿ, ಸೆ. 29: ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 1,100 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಬ್ಯಾಂಕ್ ಆಫ್ ಬರೋಡ (Bank of Baroda) ಇದೀಗ ಅಪ್ಲೈ ಮಾಡುವ ದಿನಾಂಕವನ್ನು ಅಕ್ಟೋಬರ್ 1ರ ತನಕ ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ (BOB Recruitment 2026). ವೆಲ್ತ್ ಎಕ್ಸಿಕ್ಯುಟಿವ್, ಕ್ರೆಡಿಟ್ ಅನಾಲಿಸ್ಟ್ ಹುದ್ದೆ ಇದಾಗಿದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು (Job Guide). ಈ ಹಿಂದೆ ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 24 ಎಂದು ಹೇಳಲಾಗಿತ್ತು. ಇದೀಗ ಅಕ್ಟೋಬರ್ 1ರ ತನಕ ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ವೆಲ್ತ್ ಎಕ್ಸಿಕ್ಯುಟಿವ್ 1,000 ಮತ್ತು ಕ್ರೆಡಿಟ್ ಅನಾಲಿಸ್ಟ್ 100 ಹುದ್ದೆಗಳಿವೆ. ದೇಶದ ಯಾವುದೇ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದವರು ವೆಲ್ತ್ ಎಕ್ಸಿಕ್ಯುಟಿವ್ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇನ್ನು ಕ್ರೆಡಿಟ್ ಅನಾಲಿಸ್ಟ್ ಹುದ್ದೆಗೆ ಸಿಎ/ಪದವಿ ಪೂರೈಸಿದವರು ಅಪ್ಲೈ ಮಾಡಬಹುದು. ಜತೆಗೆ ಕನಿಷ್ಠ 2 ವರ್ಷಗಳ ಕಾರ್ಯಾನುಭವ ಅಗತ್ಯ.
ಎಸ್‌ಬಿಐಯ 207 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ವಯೋಮಿತಿ
ವೆಲ್ತ್ ಎಕ್ಸಿಕ್ಯುಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 22 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ. ಕ್ರೆಡಿಟ್ ಅನಾಲಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 33 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಸಾಮಾನ್ಯ, ಇಡಬ್ಲ್ಯುಎಸ್, ಒಬಿಸಿ ಅಭ್ಯರ್ಥಿಗಳು 850 ರೂಪಾಯಿ, ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಇಎಸ್‌ಎಂ/ಡಿಇಎಸ್‌ಎಂ ಅಭ್ಯರ್ಥಿಗಳು 175 ರೂಪಾಯಿ ಆನ್‌ಲೈನ್ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ ಮತ್ತು ಮಾಸಿಕ ವೇತನ
ಅಪ್ಲಿಕೇಷನ್ ಶಾರ್ಟ್ ಲಿಸ್ಟ್, ಆನ್‌ಲೈನ್ ಟೆಸ್ಟ್, ಸೈಕೋಮೆಟ್ರಿಕ್ ಟೆಸ್ಟ್, ಗ್ರೂಪ್ ಡಿಸ್ಕಷನ್ / ವೈಯಕ್ತಿಕ ಸಂದರ್ಶನ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ವೆಲ್ತ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ 48,480 ರೂಪಾಯಿ, ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳಿಗೆ 64,820 ರೂಪಾಯಿ ಮಾಸಿಕ ವೇತನವಿದೆ.
BOB Recruitment 2026 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ದಿನಾಂಕ ವಿಸ್ತರಣೆಯ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
(ಗಮನಿಸಿ: ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಬದಲಾಗಿದ್ದು ಬಿಟ್ಟರೆ ಉಳಿದೆಲ್ಲ ಷರತ್ತು ಮೊದಲಿನ ಅಧಿಸೂಚನೆಯಂತೆಯೇ ಇರಲಿದೆ).
ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಗುಡ್‌ನ್ಯೂಸ್; 869 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರಾಜ್ಯ ಕಾರಾಗೃಹ ಇಲಾಖೆ
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ibpsreg.ibps.in/bonwejul26/) - ಹೆಸರು ನೋಂದಾಯಿಸಿ. ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ. ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್‌ಸೈಟ್ ವಿಳಾಸ: bankofbaroda.inಗೆ ಭೇಟಿ ನೀಡಿ.
ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.