ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BOI Recruitment 2025: ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿದೆ 180 ಹುದ್ದೆ; ಪದವೀಧರರು ಅಪ್ಲೈ ಮಾಡಿ

BOI Recruitment 2025: ಮುಂಬೈಯಲ್ಲಿ ಕೇಂದ್ರ ಕಚೇರಿ ಹೊಂದಿದರುವ ಭಾರತದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಇಂಡಿಯಾ ಖಾಲಿ ಇರುವ ವಿವಿಧ ಆಫೀಸರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಚೀಫ್‌ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಸೇರಿ ಒಟ್ಟು 180 ಹುದ್ದೆಗಳಿವೆ. ಪದವಿ, ಎಂಜಿನಿಯರಿಂಗ್‌ ಪದವಿ, ಸ್ನಾತಕೋತ್ತರ ಪದವಿ, ಎಲ್‌ಎಲ್‌ಬಿ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಮಾ. 23.

ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿದೆ 180 ಹುದ್ದೆ; ಹೀಗೆ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ.

Profile Ramesh B Mar 11, 2025 4:00 PM

ಬೆಂಗಳೂರು: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎಂಬ ಕನಸು ಕಾಣುವವರು ನೀವಾಗಿದ್ದರೆ ಇಲ್ಲಿದೆ ಗುಡ್‌ನ್ಯೂಸ್‌. ಮುಂಬೈಯಲ್ಲಿ ಕೇಂದ್ರ ಕಚೇರಿ ಹೊಂದಿದರುವ ಭಾರತದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಇಂಡಿಯಾ (Bank of India) ಖಾಲಿ ಇರುವ ವಿವಿಧ ಆಫೀಸರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BOI Recruitment 2025). ಚೀಫ್‌ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಸೇರಿ ಒಟ್ಟು 180 ಹುದ್ದೆಗಳಿವೆ. ಪದವಿ, ಎಂಜಿನಿಯರಿಂಗ್‌ ಪದವಿ, ಸ್ನಾತಕೋತ್ತರ ಪದವಿ, ಎಲ್‌ಎಲ್‌ಬಿ ಓದಿದವರು ಅರ್ಜಿ ಸಲ್ಲಿಸಬಹುದು (Job Guide). ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಮಾ. 23.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಚೀಫ್‌ ಮ್ಯಾನೇಜರ್‌ - 21 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ, ಬಿ.ಇ ಅಥವಾ ಬಿ.ಟೆಕ್‌, ಎಂಸಿಎ, ಎಂ.ಎಸ್‌ಸಿ, ಎಂ.ಟೆಕ್‌, ಸ್ನಾತಕೋತ್ತರ ಪದವಿ

ಸೀನಿಯರ್‌ ಮ್ಯಾನೇಜರ್‌ - 85 ಹುದ್ದೆ, ವಿದ್ಯಾರ್ಹತೆ: ಕಂಪನಿ ಸೆಕ್ರೆಟರಿ, ಬಿ.ಎಸ್‌ಸಿ, ಬಿ.ಇ ಅಥವಾ ಬಿ.ಟೆಕ್‌, ಪದವಿ, ಎಂಸಿಎ, ಎಂ.ಟೆಕ್‌

ಲಾ ಅಫೀಸರ್‌ - 17 ಹುದ್ದೆ, ವಿದ್ಯಾರ್ಹತೆ: ಎಲ್‌ಎಲ್‌ಬಿ

ಮ್ಯಾನೇಜರ್‌ - 57 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಬಿ.ಎಸ್‌ಸಿ, ಬಿ.ಇ ಅತವಾ ಬಿ.ಟೆಕ್‌, ಪದವಿ, ಎಂಸಿಎ, ಎಂ.ಎಸ್‌ಸಿ. ಜತೆಗೆ ಕಾರ್ಯಾನುಭವ ಹೊಂದಿರಬೇಕು.

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 25 ವರ್ಷದಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುದಿ ಅಭ್ಯರ್ಥಿಗಳು 175 ರೂ. ಮತ್ತು ಸಾಮಾನ್ಯ ಮತ್ತು ಇತರ ಅಭ್ಯರ್ಥಿಗಳು 850 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಆನ್‌ಲೈನ್‌ ಟೆಸ್ಟ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರವಿದೆ.

BOI Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಈ ಸುದ್ದಿಯನ್ನೂ ಓದಿ: PNB Recruitment 2025: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿದೆ 350 ಹುದ್ದೆ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲುವ ವಿಧಾನ

* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
(
https://ibpsonline.ibps.in/boiofeb5

* ಹೆಸರು ನೋಂದಾಯಿಸಿ

* ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.

* ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.

* ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.

* ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.

* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ಮಾಹಿತಿ ಅದಿಕೃತ ವೆಬ್‌ಸೈಟ್‌ ವಿಳಾಸ: bankofindia.co.inಗೆ ಭೇಟಿ ನೀಡಿ.