ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

BOI Recruitment 2026: ಪದವೀಧರರೇ ಗಮನಿಸಿ; ಬ್ಯಾಂಕ್‌ ಆಫ್‌ ಇಂಡಿಯಾದ 779 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Guide: ಭಾರತದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಇಂಡಿಯಾ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 779 ಹುದ್ದೆಗಳಿವೆ. ಪದವಿ, ಸ್ನಾತಕೋತ್ತರ ಪದವಿ ಓದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅಪ್ಲೈ ಮಾಡಲು ಕೊನೆಯ ದಿನ ಜುಲೈ 20.

ಬ್ಯಾಂಕ್‌ ಆಫ್‌ ಇಂಡಿಯಾದ  779 ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಾಟ್‌ಜಿಪಿಟಿ ರಚಿತ ಚಿತ್ರ -

Ramesh Ballamoole
Ramesh Ballamoole Jun 30, 2026 6:45 PM

ದೆಹಲಿ, ಜೂ. 30: ಬ್ಯಾಂಕ್‌ ಉದ್ಯೋಗ (Bank Jobs) ಹೊಂದಬೇಕು ಎಂಬ ಕನಸು ಕಾಣುವವರು ನೀವಾಗಿದ್ದರೆ ಇಲ್ಲಿದೆ ಗುಡ್‌ನ್ಯೂಸ್‌. ಮಹಾರಾಷ್ಟ್ರದ ಮುಂಬೈಯಲ್ಲಿ ಕೇಂದ್ರ ಕಚೇರಿ ಹೊಂದಿದರುವ ಭಾರತದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಇಂಡಿಯಾ (Bank of India) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BOI Recruitment 2026). ಕ್ರೆಡಿಟ್‌ ಆಫೀಸರ್ಸ್‌ (GBO Stream) ಹುದ್ದೆ ಇದಾಗಿದೆ. ಒಟ್ಟು 779 ಹುದ್ದೆಗಳಿವೆ. ಪದವಿ, ಸ್ನಾತಕೋತ್ತರ ಪದವಿ ಓದಿದವರು ಅರ್ಜಿ ಸಲ್ಲಿಸಬಹುದು (Job Guide). ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಜುಲೈ 20.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಂಎಂಜಿಎಸ್‌-II-677, ಎಂಎಂಜಿಎಸ್‌-III-61 ಮತ್ತು ಎಸ್‌ಎಂಜಿಎಸ್‌-IV-41 ಹುದ್ದೆಗಳಿವೆ. ದೇಶದ ಅಂಗೀಕೃತ ವಿಶ್ವವಿದ್ಯಾನಿಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಜತೆಗೆ ಸಿಎ/ಸಿಎಂಎ-ಐಸಿಡಬ್ಲ್ಯುಎ/ಸಿಎಸ್‌/ಸಿಎಫ್‌ಎ ಓದಿದವರೂ ಅಪ್ಲೈ ಮಾಡಬಹುದು. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 3ರಿಂದ 7 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 25 ವರ್ಷದಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಎಸ್‌ಬಿಐಯಿಂದ 1,500 ಹುದ್ದೆಗಳಿಗೆ ನೇಮಕಾತಿ: ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ ಅಭ್ಯರ್ಥಿಗಳು 175 ರುಪಾಯಿ ಮತ್ತು ಸಾಮಾನ್ಯ ಮತ್ತು ಇತರ ಅಭ್ಯರ್ಥಿಗಳು 850 ರುಪಾಯಿ ಆನ್‌ಲೈನ್‌ ಮೂಲಕ ಪಾವತಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ

ಆನ್‌ಲೈನ್‌ ಟೆಸ್ಟ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು, ಹುಬ್ಬ‍ಳ್ಳಿ ಹಾಗೂ ಧಾರವಾಡದಲ್ಲಿ ಪರೀಕ್ಷಾ ಕೇಂದ್ರವಿದೆ. ಆನ್‌ಲೈನ್‌ ಪರೀಕ್ಷೆ 125 ಅಂಕವನ್ನು ಒಳಗೊಂಡಿದೆ. ಇಂಗ್ಲಿಷ್‌ ಭಾಷೆ ಮತ್ತು ಹುದ್ದೆಗೆ ಅನುಗುಣವಾದ ಪ್ರಶ್ನೆಗಳಿರುತ್ತವೆ.

BOI Recruitment 2026 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (https://ibpsreg.ibps.in/boicojun26/)
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ:bankofindia.co.inಗೆ ಭೇಟಿ ನೀಡಿ ಅಥವಾ ದೂರವಾಣಿ ಸಂಖ್ಯೆ 1800 103 1906ಕ್ಕೆ ಕರೆ ಮಾಡಿ.

ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.