ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CDAC Recruitment 2025: ಸೆಂಟರ್‌ ಫಾರ್‌ ಡೆವಲಪ್‌ಮೆಂಟ್‌ ಆಫ್‌ ಅಡ್ವಾನ್ಸ್‌ಡ್‌ ಕಂಪ್ಯೂಟಿಂಗ್‌ನಲ್ಲಿದೆ 687 ಹುದ್ದೆ; ಡಿಪ್ಲೊಮಾ ಪಾಸಾದವರು ಅಪ್ಲೈ ಮಾಡಿ

Job Guide: ಸೆಂಟರ್‌ ಫಾರ್‌ ಡೆವಲಪ್‌ಮೆಂಟ್‌ ಆಫ್‌ ಅಡ್ವಾನ್ಸ್‌ಡ್‌ ಕಂಪ್ಯೂಟಿಂಗ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನ ಜತೆಗೆ ದೇಶದ ವಿವಿಧ ಕಡೆಗಳಲ್ಲಿ ಪ್ರಾಜೆಕ್ಟ್‌ ಎಂಜಿನಿಯರ್‌, ಪ್ರಾಜೆಕ್ಟ್‌ ಟೆಕ್ನಿಷಿಯನ್‌ ಸೇರಿದಂತೆ 687 ಹುದ್ದೆಗಳಿವೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಸೆಂಟರ್‌ ಫಾರ್‌ ಡೆವಲಪ್‌ಮೆಂಟ್‌ ಆಫ್‌ ಅಡ್ವಾನ್ಸ್‌ಡ್‌ ಕಂಪ್ಯೂಟಿಂಗ್‌ (Centre for Development of Advanced Computing)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (CDAC Recruitment 2025). ಬೆಂಗಳೂರಿನ ಜತೆಗೆ ದೇಶದ ವಿವಿಧ ಕಡೆಗಳಲ್ಲಿ ಪ್ರಾಜೆಕ್ಟ್‌ ಎಂಜಿನಿಯರ್‌, ಪ್ರಾಜೆಕ್ಟ್‌ ಟೆಕ್ನಿಷಿಯನ್‌ ಸೇರಿದಂತೆ 687 ಹುದ್ದೆಗಳಿವೆ. ಐಟಿಐ, ಡಿಪ್ಲೊಮಾ, ಪದವಿ, ಎಂಜಿನಿಯರಿಂಗ್‌ ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು (Job Guide). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಅಕ್ಟೋಬರ್‌ 20.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಪ್ರಾಜೆಕ್ಟ್‌ ಲೀಡರ್‌-6 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್‌ ಎಂ.ಇ ಅಥವಾ ಎಂ.ಟೆಕ್‌, ಪಿಎಚ್‌.ಡಿ

ಪ್ರಾಜೆಕ್ಟ್‌ ಸಪೋರ್ಟ್‌ ಸ್ಟಾಫ್‌-29 ಹುದ್ದೆ, ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ

ಸೀನಿಯರ್‌ ಪ್ರಾಜೆಕ್ಟ್‌ ಎಂಜಿನಿಯರ್‌-194 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್‌ ಎಂ.ಇ ಅಥವಾ ಎಂ.ಟೆಕ್‌, ಪಿಎಚ್‌.ಡಿ

ಪ್ರಾಜೆಕ್ಟ್‌ ಅಸೋಸಿಯೇಟ್‌-25 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್‌ ಎಂ.ಇ ಅಥವಾ ಎಂ.ಟೆಕ್‌

ಪ್ರಾಜೆಕ್ಟ್‌ ಮ್ಯಾನೇಜರ್‌/ಪ್ರೋಗ್ರಾಂ ಮ್ಯಾನೇಜರ್‌/ಪ್ರೋಗ್ರಾಂ ಡೆಲಿವರಿ ಮ್ಯಾನೇಜರ್‌/ನಾಲೆಡ್ಜ್‌ ಪಾರ್ಟನರ್‌-39 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್‌ ಎಂ.ಇ ಅಥವಾ ಎಂ.ಟೆಕ್‌, ಪಿಎಚ್‌.ಡಿ

ಪ್ರಾಜೆಕ್ಟ್‌ ಟೆಕ್ನೀಷಿಯನ್‌- 57 ಹುದ್ದೆ, ವಿದ್ಯಾರ್ಹತೆ: ಐಟಿಟಿ, ಡಿಪ್ಲೊಮಾ, ಪದವಿ

ಮಲ್ಟಿಮೀಡಿಯಾ ಕಮ್ಯುನಿಕೇಷನ್‌ ಅಸೋಸಿಯೇಟ್‌-1 ಹುದ್ದೆ, ವಿದ್ಯಾರ್ಹತೆ: ಎಂಬಿಎ, ಸ್ನಾತಕೋತ್ತರ ಪದವಿ

ಪ್ರಾಜೆಕ್ಟ್‌ ಆಫೀಸರ್‌-13 ಹುದ್ದೆ, ವಿದ್ಯಾರ್ಹತೆ: ಎಂಬಿಎ, ಸ್ನಾತಕೋತ್ತರ ಪದವಿ, ಎಂ.ಎ

ಪ್ರಾಜೆಕ್ಟ್‌ ಅಸಿಸ್ಟಂಟ್‌-14 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ

ಈ ಸುದ್ದಿಯನ್ನೂ ಓದಿ: Government job age limit: ರಾಜ್ಯ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್; ನೇರ ನೇಮಕಾತಿಗೆ 3 ವರ್ಷ ವಯೋಮಿತಿ ಸಡಿಲಿಕೆ

ಎಲ್ಲೆಲ್ಲ ಹುದ್ದೆಗಳಿವೆ, ಅರ್ಜಿ ಶುಲ್ಕ

ಬೆಂಗಳೂರು, ಚೆನ್ನೈ, ಹೈದರಾಬಾದ್‌, ಕೋಲ್ಕತಾ, ಮೊಹಾಲಿ, ಮುಂಬೈ, ನೋಯ್ಡಾ, ಪುಣೆ, ತಿರುವನಂತಪುರಂ, ಗುವಾಹಟಿ. ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ. ಆಯ್ಕೆಯಾದ ಅಭ್ಯರ್ಥಿಗಳಿಗೆ 3,00,000 ರೂ.-22,90,000 ರೂ. ವಾರ್ಷಿಕ ವೇತನ ದೊರೆಯಲಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 30-50 ವರ್ಷಗಳ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು.

ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (https://careers.cdac.in/)
  • ಅರ್ಜಿ ಸಲ್ಲಿಸಬೇಕಾದ ಸ್ಥಳವನ್ನು ಆಯ್ಕೆ ಮಾಡಿ.
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: https://cdac.in/ಗೆ ಭೇಟಿ ನೀಡಿ.