ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Court Recruitment: ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿದೆ 25 ಹುದ್ದೆ; ಸ್ಟೆನೋಗ್ರಾಫರ್, ಟೈಪಿಸ್ಟ್, ಜವಾನ ಹುದ್ದೆಗೆ ಅರ್ಜಿ ಆಹ್ವಾನ

ಚಾಮರಾಜನಗರ ಜಿಲ್ಲಾ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್, ಟೈಪಿಸ್ಟ್, ಟೈಪಿಸ್ಟ್–ಕಾಪಿಸ್ಟ್ ಮತ್ತು ಜವಾನ ಸೇರಿ ಒಟ್ಟು 25 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 13ರಿಂದ ಏಪ್ರಿಲ್ 13ರವರೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ -

Profile
Sushmitha Jain Mar 14, 2026 9:07 PM

ಬೆಂಗಳೂರು, ಮಾ. 14: ಚಾಮರಾಜನಗರ ಜಿಲ್ಲಾ ನ್ಯಾಯಾಲಯ ಘಟಕದ ಅಧೀನದಲ್ಲಿರುವ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ (Job Alert) ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ನೇಮಕಾತಿಯಡಿ ಒಟ್ಟು 25 ಉದ್ಯೋಗಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸ್ಟೆನೋಗ್ರಾಫರ್, ಟೈಪಿಸ್ಟ್, ಟೈಪಿಸ್ಟ್–ಕಾಪಿಸ್ಟ್ ಮತ್ತು ಜವಾನ ಕೆಲಸ ಖಾಲಿ ಇದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಹರಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಏಪ್ರಿಲ್ 13 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.

ಈ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ವಿಧಾನ, ಖಾಲಿ ಹುದ್ದೆಗಳ ವಿವರ, ವೇತನ, ವಯೋಮಿತಿ ಮತ್ತು ಆಯ್ಕೆ ಪ್ರಕ್ರಿಯೆ ಸೇರಿದಂತೆ ಇತರ ಪ್ರಮುಖ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ಸ್ಟೆನೋಗ್ರಾಫರ್ – 2 ಹುದ್ದೆ

ಟೈಪಿಸ್ಟ್ – 6 ಹುದ್ದೆ

ಟೈಪಿಸ್ಟ್ ಮತ್ತು ಕಾಪಿಸ್ಟ್ – 4 ಹುದ್ದೆ

ಜವಾನ – 13 ಹುದ್ದೆ

ವಿದ್ಯಾರ್ಹತೆ

ಸ್ಟೆನೋಗ್ರಾಫರ್, ಟೈಪಿಸ್ಟ್ ಹಾಗೂ ಟೈಪಿಸ್ಟ್–ಕಾಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಹಾಗೂ ದ್ವಿತೀಯ ಪಿಯುಸಿ (PUC) ಅಥವಾ ಮೂರು ವರ್ಷದ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಜತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಹಾಗೂ ಶೀಘ್ರಲಿಪಿ ಪರೀಕ್ಷೆಯಲ್ಲಿ ಪ್ರೌಢ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಜವಾನ ಹುದ್ದೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.

ಐಡಿಬಿಐ ಬ್ಯಾಂಕ್‌ನಲ್ಲಿದೆ ಬರೋಬ್ಬರಿ 1,300 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ವಯೋಮಿತಿ

ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ ಆಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ

ವಿಶೇಷಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಪ.ಜಾ., ಪ.ಪಂ. ಹಾಗೂ ಪ್ರವರ್ಗ 1, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 100 ರು. ಸಾಮಾನ್ಯ ಅಭ್ಯರ್ಥಿಗಳಿಗೆ 200 ರು. ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ದಿನಾಂಕ

ಈ ನೇಮಕಾತಿಗೆ ಮಾರ್ಚ್ 13ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 13 ಕೊನೆಯ ದಿನಾಂಕ. ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಗಾಗಿ ಅಭ್ಯರ್ಥಿಗಳು chamarajanagara.dcourts.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.