ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chartered Co-op Bank Recruitment 2026: ಬೆಂಗಳೂರಿನ ಚಾರ್ಟರ್ಡ್‌ ಸಹಕಾರಿ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ; ಪದವೀಧರರು ಅಪ್ಲೈ ಮಾಡಿ

ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಜೂನಿಯರ್ ಅಸಿಸ್ಟೆಂಟ್ ಹಾಗೂ ಡ್ರೈವರ್ ಕಮ್ ಅಟೆಂಡರ್ ಸೇರಿ ಒಟ್ಟು 9 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 18.

ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ. 5: ಚಾರ್ಟರ್ಡ್ ಸಹಕಾರಿ ಬ್ಯಾಂಕ್ ಖಾಲಿ ಇರುವ ಹುದ್ದೆಗಳ(Chartered Co-op Bank Recruitment 2026) ಭರ್ತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಜೂನಿಯರ್ ಅಸಿಸ್ಟೆಂಟ್ ಮತ್ತು ಡ್ರೈವರ್ ಕಮ್ ಅಟೆಂಡರ್ ಹುದ್ದೆಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶವನ್ನು ಎದುರು ನೋಡುತ್ತಿರುವವರಿಗೆ ಇದು ಉತ್ತಮ ಅವಕಾಶ. ಒಟ್ಟು 9 ಹುದ್ದೆಗಳ ಭರ್ತಿಗೆ ಈ ನೇಮಕಾತಿ ಪ್ರಕ್ರಿಯೆಯ ನಡೆಯುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 18 ಆಗಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹುದ್ದೆಗಳ ವಿವರ

ಕಿರಿಯ ಸಹಾಯಕ (Junior Assistant) – 7 ಹುದ್ದೆಗಳು

ಚಾಲಕ ಕಮ್ ಅಟೆಂಡರ್ (Driver-cum-Attender) – 2 ಹುದ್ದೆಗಳು

ವಿದ್ಯಾರ್ಹತೆ ಮತ್ತು ಅರ್ಹತೆ

ಕಿರಿಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಕಾಂ / ಎಂಕಾಂ / ಎಂಬಿಎ ಪದವಿ ಪೂರ್ಣಗೊಳಿಸಿರಬೇಕು. ಹಾಗೇ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದ್ದು, MS Office, ಡೇಟಾ ಎಂಟ್ರಿ, ಇಮೇಲ್ ವ್ಯವಹಾರ ಮುಂತಾದವುಗಳಲ್ಲಿ ತಿಳುವಳಿಕೆ ಇರಬೇಕು. ಬ್ಯಾಂಕಿಂಗ್ ಕಾರ್ಯವಿಧಾನಗಳ ತಿಳಿದಿದ್ದವರಿಗೆ ಮೊದಲ ಆದ್ಯತೆ.

ಚಾಲಕ ಕಮ್ ಅಟೆಂಡರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಜೊತೆಗೆ ಮಾನ್ಯ ಚಾಲನಾ ಪರವಾನಗಿ (Driving License) ಹೊಂದಿರಬೇಕು. ವಾಹನ ಚಾಲನೆ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಭಾಷಾ ಜ್ಞಾನ

ಎರಡೂ ಹುದ್ದೆಗಳಿಗೆ ಅಭ್ಯರ್ಥಿಗಳು ಕನ್ನಡವನ್ನು ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು.

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ. ಪ. ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ

ಕಿರಿಯ ಸಹಾಯಕರ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ 37,500 - 76,100 ರುಪಾಯಿ ಹಾಗೂ ಚಾಲಕ ಕಂ ಅಡೆಂಡೆಂಟ್​ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ 29,000- 52,800 ರುಪಾಯಿ ವೇತನ ನಿಗದಿ ಮಾಡಲಾಗಿದೆ.

ಇನ್ಫೋಸಿಸ್‌ನಿಂದ ಗುಡ್ ನ್ಯೂಸ್; ಶೀಘ್ರದಲ್ಲೇ ನಡೆಯಲಿದೆ 20,000 ನೇಮಕಾತಿ

ಆಯ್ಕೆ ಪ್ರಕ್ರಿಯೆ

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗಿದೆ. ಇದರಲ್ಲಿ ಶೈಕ್ಷಣಿಕ ಪ್ರಮಾಣ ಪತ್ರಗಳು, ಗುರುತಿನ ಚೀಟಿ, ಅನುಭವ ಪ್ರಮಾಣಪತ್ರ (ಇದ್ದರೆ), ಚಾಲನಾ ಪರವಾನಗಿ (ಸಂಬಂಧಿತ ಹುದ್ದೆಗೆ) ಇರಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ 18 ಅಂತಿಮ ದಿನವಾಗಿದ್ದು, ಭರ್ತಿಗೊಂಡ ಅರ್ಜಿ ನಮೂನೆಯನ್ನು ದಾಖಲೆಗಳೊಂದಿಗೆ ಚಾರ್ಟರ್ಡ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್ , ನಂ–1, 1ನೇ ಮುಖ್ಯ ರಸ್ತೆ, 1ನೇ ಬ್ಲಾಕ್, ಕೋರಮಂಗಲ, ಬೆಂಗಳೂರು – 560034 ಇಲ್ಲಿದೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಾಗಿ ಬ್ಯಾಂಕಿನ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸುವಂತೆ ಅಭ್ಯರ್ಥಿಗಳಿಗೆ ಸೂಚಿಸಲಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಲು ಅಥವಾ ಮುಂದುವರಿಸಲು ಬಯಸುವವರಿಗೆ ಇದು ಉತ್ತಮ ಅವಕಾಶ.