CPCB Recruitment 2025: ಸೆಂಟ್ರಲ್ ಪೊಲ್ಯೂಶನ್ ಕಂಟ್ರೋಲ್ ಬೋರ್ಡ್‌ನಲ್ಲಿದೆ 69 ಹುದ್ದೆ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಬಹುದು
Job Guide: ಸೆಂಟ್ರಲ್ ಪೊಲ್ಯೂಶನ್ ಕಂಟ್ರೋಲ್ ಬೋರ್ಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸೈಂಟಿಸ್ಟ್, ಅಪ್ಪರ್ ಡಿವಿಷನ್ ಕ್ಲರ್ಕ್, ಅಸಿಸ್ಟಂಟ್, ಅಕೌಂಟ್ ಅಸಿಸ್ಟಂಟ್ ಸೇರಿ ಒಟ್ಟು 69 ಹುದ್ದೆಗಳಿವೆ. 10ನೇ ತರಗತಿ, ದ್ವಿತೀಯ ಪಿಯುಸಿ, ಪದವಿ, ಡಿಪ್ಲೊಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಏ. 28.

ಸಾಂದರ್ಭಿಕ ಚಿತ್ರ.

ಹೊಸದಿಲ್ಲಿ: ಭಾರತ ಸರ್ಕಾರದ ಅಧೀನದಲ್ಲಿ ಬರುವ ಸೆಂಟ್ರಲ್ ಪೊಲ್ಯೂಶನ್ ಕಂಟ್ರೋಲ್ ಬೋರ್ಡ್ (Central Pollution Control Board) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (CPCB Recruitment 2025). ಸೈಂಟಿಸ್ಟ್, ಅಪ್ಪರ್ ಡಿವಿಷನ್ ಕ್ಲರ್ಕ್, ಅಸಿಸ್ಟಂಟ್, ಅಕೌಂಟ್ ಅಸಿಸ್ಟಂಟ್ ಸೇರಿ ಒಟ್ಟು 69 ಹುದ್ದೆಗಳಿವೆ. 10ನೇ ತರಗತಿ, ದ್ವಿತೀಯ ಪಿಯುಸಿ, ಪದವಿ, ಡಿಪ್ಲೊಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು (Job Guide). ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಏ. 28.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಸೈಂಟಿಸ್ಟ್ 'ಬಿ'- 22 ಹುದ್ದೆ, ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ
ಸಹಾಯಕ ಕಾನೂನು ಅಧಿಕಾರಿ- 1 ಹುದ್ದೆ, ವಿದ್ಯಾರ್ಹತೆ: ಎಲ್‌ಎಲ್‌ಬಿ
ಸೀನಿಯರ್ ಟೆಕ್ನಿಕಲ್ ಸೂಪರ್ ವೈಸರ್- 2 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್
ಸೀನಿಯರ್ ಸೈಂಟಿಫಿಕ್ ಅಸಿಸ್ಟೆಂಟ್ - 4 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಟೆಕ್ನಿಕಲ್ ಸೂಪರ್‌ವೈಸರ್- 5 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್
ಅಸಿಸ್ಟೆಂಟ್ - 4 ಹುದ್ದೆ, ವಿದ್ಯಾರ್ಹತೆ: ಪದವಿ
ಅಕೌಂಟ್ಸ್ ಅಸಿಸ್ಟೆಂಟ್- 2 ಹುದ್ದೆ, ವಿದ್ಯಾರ್ಹತೆ: ಪದವಿ
ಜೂನಿಯರ್ ಟ್ರಾನ್ಸ್‌ಲೇಟರ್ - 1 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಸೀನಿಯರ್ ಡ್ರಾಫ್ಟ್‌ಮ್ಯಾನ್ 1 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್
ಜೂನಿಯರ್ ಟೆಕ್ನಿಷಿಯನ್ - 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ
ಸೀನಿಯರ್ ಲ್ಯಾಬೊರೇಟರಿ ಅಸಿಸ್ಟೆಂಟ್ - 2 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಅಪ್ಪರ್ ಡಿವಿಷನ್ ಕ್ಲರ್ಕ್ - 8 ಹುದ್ದೆ, ವಿದ್ಯಾರ್ಹತೆ: ಪದವಿ
ಡೇಟಾ ಎಂಟ್ರಿ ಆಪರೇಟರ್ ಗ್ರೇಡ್-2 - 1 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಸ್ಟೆನೋಗ್ರಾಫರ್ ಗ್ರೇಡ್-2 - 3 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಜೂನಿಯರ್ ಲ್ಯಾಬೊರೇಟರಿ ಅಸಿಸ್ಟೆಂಟ್ - 2 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಲೋವರ್ ಡಿವಿಷನ್ ಕ್ಲರ್ಕ್ 5 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಫೀಲ್ಡ್ ಅಟೆಂಡೆಂಟ್ 1 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) - 3 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ. ಜತೆಗೆ ಕಾರ್ಯಾನುಭವ ಇರಬೇಕು.
ವಯೋಮಿತಿ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿ 3 ವರ್ಷ, ಎಸ್/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಎಸ್‌ಸಿ/ಎಸ್‌ಟಿ/ಪಿಎಬ್ಲ್ಯುಬಿಡಿ/ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಇತರ ಎಲ್ಲ ಇತರ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,000 ರೂ. ಪಾವತಿಸಬೇಕು.
CPCB Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: BOB Recruitment 2025: ಬ್ಯಾಂಕ್ ಆಫ್ ಬರೋಡಾದಲ್ಲಿದೆ 146 ಹುದ್ದೆ; ಹೀಗೆ ಅಪ್ಲೈ ಮಾಡಿ
ಅರ್ಜಿ ಸಲ್ಲಿಸುವ ವಿಧಾನ
* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://app1.iitd.ac.in
* ಹೆಸರು ನೋಂದಾಯಿಸಿ.
* ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
* ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
* ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ)
* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.