DCC Bank Recruitment: 10ನೇ ತರಗತಿ ಪಾಸಾದವರಿಗೆ DCC ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ: ಇಲ್ಲಿದೆ ವಿವರ
ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ವಿವಿಧ ಶಾಖೆಗಳಲ್ಲಿ ಅಗತ್ಯವಿರುವ ಬರೋಬರಿ 70 ಪೋಸ್ಟ್‌ಗಳ ಭರ್ತಿಗೆ ಪ್ರಕಟಣೆ ಹೊರಡಿಸಲಾಗಿದೆ. ಪದವಿ, ಹತ್ತನೇ ಪಾಸಾದವರು ಈ ಹುದ್ದೆಗಳಿಗೆ ಡಿಸೆಂಬರ್ 22ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆ ವಿಧಾನ, ಇತರ ಮಾಹಿತಿ ಇಲ್ಲಿದೆ.
ಸಾಂಧರ್ಬಿಕ ಚಿತ್ರ. -
ಬೆಂಗಳೂರು, ಡಿ. 1: ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ (Raichur and Koppala District Central Cooperative Bank) ಶಾಖೆಗಳಲ್ಲಿ ಖಾಲಿ ಇರುವ 70 ಗ್ರೂಪ್ ಎ, ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳನ್ನು (Job) ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಶಾಖಾ ವ್ಯವಸ್ಥಾಪಕರು, ಸಹಾಯಕರು ಹಾಗೂ ಅಟೆಂಡರ್ ಹುದ್ದೆಗಳ ಭರ್ತಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಆಸಕ್ತರು ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ ascguru.com/raichur-dcc-bankಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತೆಗಳು, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ, ಇತರ ಮಾಹಿತಿ ಇಲ್ಲಿದೆ ನೋಡಿ.
ವಿದ್ಯಾರ್ಹತೆ
ಶಾಲಾ ವ್ಯವಸ್ಥಾಪಕ ಹುದ್ದೆಗಳ ವಿಭಾಗದಲ್ಲಿ 15 ಹುದ್ದೆಗಳು ಖಾಲಿ ಇದ್ದು, ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
ಸಹಾಯಕ ಗ್ರೇಡ್ ಹುದ್ದೆಗಳ ವಿಭಾಗದಲ್ಲಿ 45 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
ಒಟ್ಟು 10 ಅಟೆಂಡರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ
ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಕನಿಷ್ಠ 18ರಿಂದ ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಪ್ರವರ್ಗ 2ಎ, 2ಬಿ ಮತ್ತು 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC/ST ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ
ಶಾಖಾ ವ್ಯವಸ್ಥಾಪಕರು ಗ್ರೇಡ್ ಹಾಗೂ ಸಹಾಯಕ ಗ್ರೇಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಮೆರಿಟ್ ಅಭ್ಯರ್ಥಿಗಳಿಗೆ 1,600 ರೂ. ಪ.ಜಾ, ಪ.ಪಂ, ಪ್ರವರ್ಗ 1, ಮಾಜಿ ಸೈನಿಕರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 800 ರೂ. ಹಾಗೂ ಅಟೆಂಡರ್ ಹುದ್ದೆಗೆ ಪ.ಜಾ, ಪ.ಪಂ, ಪ್ರವರ್ಗ 1, ಮಾಜಿ ಸೈನಿಕರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 500 ರೂ., ಇತರ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಗುಪ್ತಚರ ಇಲಾಖೆಯಲ್ಲಿದೆ 362 ಹುದ್ದೆ; 10ನೇ ತರಗತಿ ಪಾಸಾದವರು ಅಪ್ಲೈ ಮಾಡಿ
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಆನ್‌ಲೈನ್ ಅರ್ಜಿ ಸಲ್ಲಿಕೆ ಹೇಗೆ?
- ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಬ್ಯಾಂಕ್ ಒಕ್ಕೂಟದ ವೆಬ್‌ಸೈಟ್ https://tascguru.com/raichur-dcc-bank/ಗೆ ಭೇಟಿ ನೀಡಿ
- ಓಪನ್ ಆದ ವೆಬ್‌ಪೇಜ್‌ನಲ್ಲಿ 'Apply Here' ಬಟನ್ ಮೇಲೆ ಕ್ಲಿಕ್ ಮಾಡಿ
- ನಂತರ ಓಪನ್ ಆಗುವ ವೆಬ್‌ಪೇಜ್‌ನಲ್ಲಿ ಇಮೇಲ್ ಐಡಿ, ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
- ಮೊದಲು ಹೆಸರು ನೋಂದಾಯಿಸಿ
- ನಂತರ ಲಾಗಿನ್ ಆಗಿ
- ಈಗ ಅರ್ಜಿ ಸಲ್ಲಿಸಿ
- ಅಗತ್ಯ ಸ್ಕ್ಯಾನ್ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಮರೆಯದಿರಿ
- ಅಂಚೆ ಮೂಲಕ ಅರ್ಜಿ ಶುಲ್ಕ ಪಾವತಿಸಲು ಚಲನ್ ಪ್ರಿಂಟ್ ತೆಗೆದುಕೊಳ್ಳಿ.
- ಶುಲ್ಕ ಪಾವತಿಸಿ, ಮತ್ತೊಮ್ಮೆ ಅರ್ಜಿ ಶುಲ್ಕ ಪಾವತಿಸಿದ ಮಾಹಿತಿಯನ್ನು ಅಪ್ಲಿಕೇಶನ್ ಪೂರ್ಣಗೊಳಿಸಲು ನೀಡಬೇಕು.
ಇನ್ನು ಈ ಹುದ್ದೆಗಳಿಗೆ ಈಗಾಗಲೇ ನವೆಂಬರ್ 21ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 22 ಕೊನೆ ದಿನವಾಗಿದೆ. ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ascguru.com/raichur-dcc-bank ಇಲ್ಲಿಗೆ ಭೇಟಿ ನೀಡಬಹುದು.