ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

GTTC Diploma ಓದಿದವರಿಗೂ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ; ಸರ್ಕಾರದಿಂದ ಮಹತ್ವದ ಆದೇಶ

VAO Recruitment: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಗ್ರೂಪ್‌ ಸಿ ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಜಿಟಿಟಿಸಿ ನಡೆಸುತ್ತಿರುವ 3+1 (1 ವರ್ಷದ ಇಂಟರ್ನ್‌ಶಿಪ್‌ ಸೇರಿದಂತೆ) ವರ್ಷ ಅವಧಿಯ ಡಿಪ್ಲೋಮಾ ಕೋರ್ಸ್‌ ಪೂರೈಸಿದವರೂ ಅಪ್ಲೈ ಮಾಡಬಹುದು ಎಂದು ತಿಳಿಸಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು, ಆ. 19: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಗ್ರೂಪ್‌ ಸಿ ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೀಗ ಮಹತ್ವದ ಅಪ್‌ಡೇಟ್‌ ಪ್ರಕಟಿಸಿದೆ (VAO Recruitment). ಜಿಟಿಟಿಸಿ ನಡೆಸುತ್ತಿರುವ 3+1 (1 ವರ್ಷದ ಇಂಟರ್ನ್‌ಶಿಪ್‌ ಸೇರಿದಂತೆ) ವರ್ಷ ಅವಧಿಯ ಡಿಪ್ಲೋಮಾ ಕೋರ್ಸ್‌ ಪೂರೈಸಿರುವ ಅರ್ಹ ಅಭ್ಯರ್ಥಿಗಳೂ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ. ಹೀಗಾಗಿ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಆಗಸ್ಟ್‌ 20ರೊಳಗೆ ಅಪ್ಲೈ ಮಾಡಬಹುದು. ಅರ್ಜಿ ಶುಲ್ಕ ಪಾವತಿಸಲು ಆಗಸ್ಟ್‌ 21 ಕೊನೆಯ ದಿನ.

ಜಿಟಿಟಿಸಿ ನಡೆಸುತ್ತಿರುವ 3+1 ವರ್ಷ ಅವಧಿಯ ಡಿಪ್ಲೋಮಾ ಕೋರ್ಸ್‌ ತಾಂತ್ರಿಕ ಶಿಕ್ಷಣ ಇಲಾಖೆಯ 3 ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸ್‌ಗೆ ಸಮನಾಗಿದೆ ಎಂದು ಪರಿಗಣಿಸಿ ಸರ್ಕಾರ ಆದೇಶ ಹೊರಡಿಸಿದೆ. ಆದ್ದರಿಂದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಅರ್ಹರೆಂದು ಪರಿಗಣಿಸಲಾಗಿದೆ. ಇದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಉಳಿದಂತೆ ನಿಯಮಗಳು ಅದೇ ರೀತಿ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ:



2 ಬಾರಿ ಅವಧಿ ವಿಸ್ತರಣೆ

ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಕಲ್ಯಾಣ ಕರ್ನಾಟಕ (KK) ಮತ್ತು ಉಳಿಕೆ ಮೂಲ ವೃಂದದಲ್ಲಿ(RPC) ಒಟ್ಟು 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಖಾಲಿ ಇದೆ. ವಿಶೇಷ ಎಂದರೆ ಆನ್‌ಲೈನ್‌ ಅರ್ಜಿ ಸಲ್ಲಿಕೆ ದಿನಾಂಕವನ್ನು 2 ಬಾರಿ ವಿಸ್ತರಿಸಿದೆ. ಆರಂಭದಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಜುಲೈ 30 ಮತ್ತು ಶುಲ್ಕ ಪಾವತಿಸಲು ಜುಲೈ 31ರವರೆಗೆ ಅವಕಾಶ ನೀಡಲಾಗಿತ್ತು. ಬಳಿಕ ಅದನ್ನು ಆಗಸ್ಟ್‌ 7 ಮತ್ತು 8ಕ್ಕೆ ಮರುನಿಗದಿಪಡಿಸಲಾಯಿತು. ನಂತರ ಆಗಸ್ಟ್‌ 20ರ ತನಕ ಅರ್ಜಿ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.

ಸ್‌ಬಿಐಯಲ್ಲಿದೆ 9,124 ಜೂನಿಯರ್ ಅಸೋಸಿಯೇಟ್ ಹುದ್ದೆ; ಹೀಗೆ ಅಪ್ಲೈ ಮಾಡಿ

GTTC ಎಂದರೇನು?

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC) ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಬರುವ ಒಂದು ಪ್ರತಿಷ್ಠಿತ ಸ್ವಾಯತ್ತ ಸಂಸ್ಥೆ. ಇದು 1972ರಲ್ಲಿ ಸ್ಥಾಪನೆಯಾಯಿತು. ಕೈಗಾರಿಕೆಗಳಿಗೆ ಬೇಕಾದ ನುರಿತ ತಾಂತ್ರಿಕ ಮಾನವ ಸಂಪನ್ಮೂಲವನ್ನು ತಯಾರು ಮಾಡುವುದು ಈ ಕೋರ್ಸ್‌ನ ಮುಖ್ಯ ಉದ್ದೇಶ. ಪ್ರಸ್ತುತ ಕರ್ನಾಟಕದಾದ್ಯಂತ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸುಮಾರು 38ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ಪರೀಕ್ಷಾ ವಿಧಾನ

ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮೂಲಕ ನಡೆಯಲಿದೆ. ಅದರಂತೆ, ಪರೀಕ್ಷೆಯಲ್ಲಿ ಎರಡು ಪತ್ರಿಕೆಗಳಿರುತ್ತವೆ. ಬೆಳಗ್ಗೆ 10.30ರಿಂದ 12.30ರವರೆಗೆ ಮೊದಲ ಪತ್ರಿಕೆ ಮತ್ತು ಮಧ್ಯಾಹ್ನ 2.30ರಿಂದ 4.30ರವರೆಗೆ ಎರಡನೇ ಪತ್ರಿಕೆ ನಡೆಯಲಿದೆ. ಇನ್ನೂ, ಪ್ರತಿ ಪತ್ರಿಕೆಗೆ 100 ಅಂಕಗಳು ಮತ್ತು 100 ಪ್ರಶ್ನೆಗಳಿರುತ್ತವೆ.

ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author